Sunday, January 19, 2025
ಕ್ರೈಮ್ದಕ್ಷಿಣ ಕನ್ನಡಸುದ್ದಿ

ಮನೆಗೆ ನುಗ್ಗಿ ಅಪ್ರಾಪ್ತೆಯ ಮಾನಭಂಗಕ್ಕೆ ಯತ್ನ ; ಆರೋಪಿ ಪಂಜಿಮೊಗರಿನ ಮುಸ್ತಫಾ ಬಂಧನ – ಕಹಳೆ ನ್ಯೂಸ್

ಮಂಗಳೂರು, ಜು 18 : ಅಪ್ರಾಪ್ತ ವಯಸ್ಕ ವಿದ್ಯಾರ್ಥಿನಿಗೆ ಪೋನ್ ಮಾಡುವಂತೆ ಪೀಡಿಸುತ್ತಿದ್ದಲ್ಲದೇ, ಯಾರು ಇಲ್ಲದ ವೇಳೆ ಮನೆಗೆ ನುಗ್ಗಿ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ನಗರದ ಮಹಿಳಾ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.


ಬಂಧಿತ ಆರೋಪಿಯನ್ನು ಪಂಜಿಮೊಗರಿನ ಮುಸ್ತಫಾ (35) ಎಂದು ಗುರುತಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಆರೋಪಿಯು ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಶಾಂತಿನಗರದ ತರಕಾರಿ ಅಂಗಡಿಯೊಂದರಲ್ಲಿ ಕೆಲಸಕ್ಕಿದ್ದ. ಅಪ್ರಾಪ್ತ ವಿದ್ಯಾರ್ಥಿನಿ ತಾಯಿಯೊಂದಿಗೆ ಬಾಡಿಗೆ ಮನೆಯಲ್ಲಿ ವಾಸವಿದ್ದು, ತರಕಾರಿ ತರಲು ಅಂಗಡಿಗೆ ಹೋದಾಗ ಪೋನ್ ಮಾಡುವಂತೆ ಪೀಡಿಸುತ್ತಿದ್ದ. ಜು.8ರಂದು ರಾತ್ರಿ 8.30ಕ್ಕೆ ಬಾಲಕಿ ಮನೆಯಲ್ಲೇ ಒಬ್ಬಳೇ ಇದ್ದಾಗ ಮನೆಗೆ ಅಕ್ರಮವಾಗಿ ಪ್ರವೇಶಿಸಿ ಮಾನಭಂಗಕ್ಕೆ ಯತ್ನಿಸಿದ್ದಲ್ಲದೆ ಕೃತ್ಯವನ್ನು ಇತರರಿಗೆ ಹೇಳಿದರೆ ಜೀವಸಹಿತ ಬಿಡುವುದಿಲ್ಲ ಎಂದು ಬೆದರಿಕೆಯೊಡ್ಡಿರುವುದಾಗಿ ದೂರು ದಾಖಲಾಗಿದ್ದುಅದರಂತೆ ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಮಹಿಳಾ ಪೊಲೀಸರು ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು