ಕೇರಳದಲ್ಲಿ ಮಂಕಿಫಾಕ್ಸ್ ಎರಡನೇ ಪಾಸಿಟಿವ್ ; ಶನಿವಾರ ಮಂಗಳೂರು ಏರ್ ಪೋರ್ಟ್ ಮೂಲಕ ಆಗಮಿಸಿದ ಯುವಕನಿಗೆ ಮಂಕಿಫಾಕ್ಸ್ ಪಾಸಿಟಿವ್ – ಕಹಳೆ ನ್ಯೂಸ್
ಕಣ್ಣೂರು, ಜು 18 : ಕೇರಳದಲ್ಲಿ ಮಂಕಿಫಾಕ್ಸ್ ಎರಡನೇ ಪಾಸಿಟಿವ್ ಪ್ರಕರಣ ಕಣ್ಣೂರು ಜಿಲ್ಲೆಯಲ್ಲಿ ದೃಢಪಟ್ಟಿದೆ ರಾಜ್ಯ ಆರೋಗ್ಯ ಸಚಿವಾಲಯ ದೃಢಪಡಿಸಿದೆ.
ವಿದೇಶದಿಂದ ಮಂಗಳೂರು ವಿಮಾನ ನಿಲ್ದಾಣದ ಮೂಲಕ ಕಣ್ಣೂರಿಗೆ ಆಗಮಿಸಿದ ಯುವಕನೋರ್ವನಿಗೆ ಮಂಕಿಫಾಕ್ಸ್ ರೋಗಲಕ್ಷಣ ಕಾಣಿಸಿಕೊಂಡ ಹಿನ್ನಲೆಯಲ್ಲಿ ಆತನನ್ನು ಪರಿಯಾರಂ ಮೆಡಿಕಲ್ ಕಾಲೇಜಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಮಂಕಿಪಾಕ್ಸ್ ರೋಗ ಲಕ್ಷಣಗಳು ಕಾಣಿಸಿಕೊಂಡಿರುವ ಕಾರಣ ಯುವಕನ ಮಾದರಿ ಸಂಗ್ರಹಿಸಿ ಪುಣೆಯಲ್ಲಿರುವ ವೈರಾಲಜಿ ಕೇಂದ್ರಕ್ಕೆ ಪರೀಕ್ಷೆಗೆ ಕಳುಹಿಸಿಕೊಡಲಾಗಿತ್ತು, ಇಂದು ಬಂದ ಫಲಿತಾಂಶದಲ್ಲಿ ಮಂಕಿಫಾಕ್ಸ್ ಪಾಸಿಟಿವ್ ಎಂದು ದೃಢಪಟ್ಟಿದೆ. ಕೇರಳದಲ್ಲಿ ಮೊದಲ ಮಂಕಿಫಾಕ್ಸ್ ಪ್ರಕರಣ ಜು.12 ರಂದು ದಾಖಲಾಗಿತ್ತು.
ಈತ ವಿದೇಶದಿಂದ ಶನಿವಾರ ಮಂಗಳೂರು ಏರ್ ಪೋರ್ಟ್ ಮೂಲಕ ಆಗಮಿಸಿ ಅಲ್ಲಿಂದ ಕಣ್ಣೂರಿಗೆ ತೆರಳಿದ್ದ.