Monday, January 20, 2025
ದಕ್ಷಿಣ ಕನ್ನಡರಾಜಕೀಯಸುದ್ದಿ

ಬಿಜೆಪಿ ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿ ಆರ್ ಎಸ್‍ಎಸ್ ಪ್ರಚಾರಕರಾಗಿ ಕಾರ್ಯನಿರ್ವಹಿಸಿದ್ದ, ದಕ್ಷಿಣ ಕನ್ನಡ ಜಿಲ್ಲೆಯ ಕಡಬದ ರಾಜೇಶ್ ಕುಂತೂರು ನೇಮಕ – ಕಹಳೆ ನ್ಯೂಸ್

ಬೆಂಗಳೂರು: ಬಿಜೆಪಿ ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿ ರಾಜೇಶ್ ಕುಂತೂರು ನಿಯುಕ್ತಿಗೊಂಡಿದ್ದಾರೆ.

ಈವರೆಗೆ ಈ ಜವಾಬ್ದಾರಿ ಹೊತ್ತಿದ್ದ ಅರುಣ್ ಕುಮಾರ್ ಅವರಿಗೆ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಕರ್ನಾಟಕ ದಕ್ಷಿಣ ಮತ್ತು ಉತ್ತರ ಪ್ರಾಂತದ ಪ್ರಚಾರ ಪ್ರಮುಖ್ ಜವಾಬ್ದಾರಿ ನೀಡಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ರಾಜೇಶ್ ಕುಂತೂರು ಪ್ರಸ್ತುತ ತುಮಕೂರು ವಿಭಾಗದ ಪ್ರಚಾರಕರಾಗಿದ್ದು, ಬಿಜೆಪಿ ಸಂಘಟನಾ ಕಾರ್ಯದರ್ಶಿಯ ಮಹತ್ವದ ಜವಾಬ್ದಾರಿಗೆ ನಿಯೋಜಿಸಲಾಗಿದೆ. ಬಿಜೆಪಿಯ ರಾಷ್ಟ್ರೀಯ ನಾಯಕರು, ರಾಜೇಶ್ ಅವರನ್ನು ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿ ನೇಮಕ ಮಾಡಿ ಅಧಿಕೃತ ಆದೇಶ ಹೊರಡಿಸಬೇಕಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

2010 ರಿಂದ ಸಂಘದ ಪೂರ್ಣಾವಧಿ ಪ್ರಚಾರಕರಾಗಿ ಸೇವೆ ಸಲ್ಲಿಸುತ್ತಿರುವ ಇವರು ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಸಮೀಪದ ಕುಂತೂರಿನವರು. ಶಿವಮೊಗ್ಗ, ಮೈಸೂರು ಸೇರಿದಂತೆ ವಿವಿಧೆಡೆ ಅವರು ಆರ್ ಎಸ್‍ಎಸ್ ಪ್ರಚಾರಕರಾಗಿ ಕಾರ್ಯನಿರ್ವಹಿಸಿದ್ದರು. 2021 ರಿಂದ ಅವರು ತುಮಕೂರು ಪ್ರಚಾರಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಆರ್ ಎಸ್‍ಎಸ್ ಉತ್ತರ ಮತ್ತು ದಕ್ಷಿಣ ಪ್ರಾಂತಗಳ ಸಮನ್ವಯ ಬೈಠಕ್ ಬೆಂಗಳೂರಿನ ರಾಷ್ಟ್ರೋತ್ಥಾನ ಪರಿಷತ್‍ನಲ್ಲಿ ಇಂದು ನಡೆಯಿತು. ಅಲ್ಲಿ ಒಟ್ಟು ಐವರು ಪ್ರಚಾರಕರ ಜವಾಬ್ದಾರಿಗಳಲ್ಲಿ ಬದಲಾವಣೆ ಮಾಡಲಾಗಿದೆ. ರಾಜ್ಯದಲ್ಲಿ ವಿಧಾನಸಭೆ ಚುನಾವಣೆಗಳು ಇನ್ನು ಒಂದು ವರ್ಷಕ್ಕೂ ಕಡಿಮೆ ಅವಧಿಯಲ್ಲಿ ನಡೆಯಲಿದ್ದು, ಈ ಸಮಯದಲ್ಲಿ ಸಂಘಟನಾ ಕಾರ್ಯದರ್ಶಿ ಬದಲಾವಣೆ ಅಚ್ಚರಿಗೆ ಕಾರಣವಾಗಿದೆ.