Sunday, January 19, 2025
ಕುಂದಾಪುರಸುದ್ದಿ

ಕಾಪು ಹೊಸ ಮಾರಿಗುಡಿ ದೇಗುಲಕ್ಕೆ ಭೇಟಿ ನೀಡಿದ ಮಿಸ್ ಇಂಡಿಯಾ ವಿಜೇತೆ ಸಿನಿ ಶೆಟ್ಟಿ -ಕಹಳೆ ನ್ಯೂಸ್

ಕಾಪು: ತವರೂರಿಗೆ ಆಗಮಿಸಿದ ಮಿಸ್ ಇಂಡಿಯಾ ವಿಜೇತೆ ಸಿನಿ ಶೆಟ್ಟಿ ಅವರು ನಿನ್ನೆ ಕಾಪುವಿನ ಹೊಸ ಮಾರಿಗುಡಿ ದೇಗುಲಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಮಿಸ್ ಇಂಡಿಯಾ ಗೆದ್ದ ನಂತರ ಮೊದಲ ಬಾರಿಗೆ ದೇವಾಲಯಕ್ಕೆ ಭೇಟಿ ನೀಡಿದ ಸಿನಿ ಶೆಟ್ಟಿ ಅವರನ್ನು ದೇವಾಲಯದ ವತಿಯಿಂದ ಅಭಿನಂದಿಸಲಾಯಿತು. ಹೊಸ ಮಾರಿಗುಡಿ ಜೀರ್ಣೋದ್ಧಾರ ಕಾರ್ಯ ಭರದಿಂದ ಸಾಗುತ್ತಿದ್ದು ಸಿನಿ ಶೆಟ್ಟಿಯ ತಂದೆ ಹೊಸ ಮಾರಿಗುಡಿ ಜೀರ್ಣೋದ್ಧಾರ ಸಮಿತಿ ಮುಂಬೈ ಸಮಿತಿಯ ಸದಸ್ಯರಾಗಿದ್ದಾರೆ. ಈ ಸಂದರ್ಭ ಮಾಧ್ಯಮದೊಂದಿಗೆ ಮಾತನಾಡಿದ ಸಿನಿ ಶೆಟ್ಟಿ ‘ಬಾಲ್ಯದಿಂದಲೂ ನಮ್ಮ ತಂದೆ ಅಮ್ಮನ ದೇವಾಲಯಕ್ಕೆ ಕರೆದುಕೊಂಡು ಬರುತ್ತಿದ್ದರು.

ನಮ್ಮ ತಂದೆ ತಾಯಿ ಹೊಸ ಮಾರಿಗುಡಿ ದೇವಾಲಯದ ಭಕ್ತರು ನಾನು ಮಿಸ್ ಇಂಡಿಯಾ ಗೆಲ್ಲಬೇಕೆಂದು ದೇವರಲ್ಲಿ ಪ್ರಾರ್ಥನೆ ಮಾಡಿದ್ದೆ ಇಲ್ಲಿ. ಆದ್ದರಿಂದ ದೇವಾಲಯದ ಜೀರ್ಣೋದ್ಧಾರ ಕಾರ್ಯಕ್ಕೆ ಶಿಲಾ ಸೇವೆ ನೀಡುತ್ತಿದ್ದೇವೆ. ಮುಂದಿನ ದಿನಗಳಲ್ಲಿ ಎಲ್ಲರೂ ದೇವಾಲಯದ ಜೀರ್ಣೋದ್ಧಾರ ಕಾರ್ಯದಲ್ಲಿ ತೊಡಗಿಸಿಕೊಳ್ಳಿ’ ಎಂದು ಹೇಳಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಕಾಪು ಹೊಸ ಮಾರಿಗುಡಿ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಕೆ ವಾಸದೇವ ಶೆಟ್ಟಿ ದೇವಾಲಯದ ಜೀರ್ಣೋದ್ಧಾರದ ಬಗ್ಗೆ ಮಾಹಿತಿ ನೀಡಿ ಮಾತನಾಡಿ ‘ಸಿನಿ ಶೆಟ್ಟಿ ದೇವಾಲಯಕ್ಕೆ ಭೇಟಿ ನೀಡಿದ್ದು ನಮಗೆ ಸಂತಸ ತಂದಿದೆ. ದೇವಾಲಯದ ಜೀರ್ಣೋದ್ಧಾರ ಕಾರ್ಯಕ್ಕೆ ಶಿಲಾ ಸೇವೆ ನೀಡುತ್ತಿದ್ದು ಮುಂದಿನ ದಿನಗಳಲ್ಲಿ ಎಲ್ಲಾ ಭಕ್ತರು ಇಲ್ಲಿಗೆ ಸೇವೆ ನೀಡಿ ಅಮ್ಮನ ದಿವ್ಯ ದೇಗುಲದ ಜೀರ್ಣೋದ್ಧಾರ ಕಾರ್ಯದಲ್ಲಿ ತೊಡಗಿಸಿಕೊಳ್ಳಿ’ ಎಂದು ಹೇಳಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭ ದೇವಾಲಯದ ಅಭಿವೃದ್ಧಿ ಸಮಿತಿಯ ಪದಾಧಿಕಾರಿಗಳು, ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರು ಮತ್ತು ಸದಸ್ಯರು ಅರ್ಚಕರು ದೇವಾಲಯದ ಸಿಬ್ಬಂದಿಗಳು ಉಪಸ್ಥಿತರಿದ್ದರು.