Thursday, January 23, 2025
ಸುದ್ದಿ

ಚಾಕೊಲೇಟ್ ನುಂಗಿ ಉಸಿರುಗಟ್ಟಿ ಮೃತಪಟ್ಟ ಬಾಲಕಿ..!- ಕಹಳೆ ನ್ಯೂಸ್

ಬೈಂದೂರು: ಬಾಲಕಿಯೊಬ್ಬಳು ಚಾಕೊಲೇಟ್ ನುಂಗಿ ಉಸಿರುಗಟ್ಟಿ ಮೃತಪಟ್ಟ ದಾರುಣ ಘಟನೆ ಇಂದು ಸಂಭವಿಸಿದೆ.ಬೈಂದೂರು ತಾಲೂಕಿನ ಬವಳಾಡಿ ಮೂಲದ ಸಮನ್ವಿ (6) ಮೃತಪಟ್ಟ ಬಾಲಕಿಯಾಗಿದ್ದಾಳೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಈಕೆ ಉಪ್ಪುಂದ ಸ್ಥಳೀಯ ಆಂಗ್ಲ ಮಾಧ್ಯಮ ಶಾಲೆಯೊಂದರಲ್ಲಿ ವಿದ್ಯಾರ್ಥಿನಿಯಾಗಿದ್ದಾಳೆ.ಈ ಬಾಲಕಿ ಶಾಲೆಯ ಬಸ್ ಗೆ ಕಾಯುತ್ತಿರುವ ಸಮಯದಲ್ಲಿ ಚಾಕೊಲೇಟ್ ತಿನ್ನುತ್ತಿರುವಾಗ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.ಸದ್ಯ ಬಾಲಕಿಯ ಮೃತದೇಹವನ್ನು ಮಣಿಪಾಲದ ಕೆ.ಎಂ.ಸಿ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು,ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.