Recent Posts

Sunday, January 19, 2025
ಕುಂದಾಪುರಸುದ್ದಿ

ಕುಂದಾಪುರ: ಗದ್ದೆ ಕೆಲಸಕ್ಕೆ ಹೋಗಿದ್ದ ಯುವಕ ಕೆರೆಯಲ್ಲಿ ಶವವಾಗಿ ಪತ್ತೆ – ಕಹಳೆ ನ್ಯೂಸ್

ಕುಂದಾಪುರ: ಗದ್ದೆ ಕೆಲಸಕ್ಕೆ ಹೋಗಿದ್ದ ಯುವಕನೋರ್ವನ ಮೃತದೇಹ ಕೆರೆಯಲ್ಲಿ ಪತ್ತೆಯಾದ ಘಟನೆ ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದ ಕೂರ್ಸಿ ಎಂಬಲ್ಲಿ ನಡೆದಿದೆ.

ಕೂರ್ಸಿ ನಿವಾಸಿ ಕಾರ್ತಿಕ್ ಆಚಾರ್ (26) ಮೃತ ಯುವಕ.

ಜಾಹೀರಾತು
ಜಾಹೀರಾತು
ಜಾಹೀರಾತು

ನಿನ್ನೆ ಮಧ್ಯಾಹ್ನ ಊಟದ ಬಳಿಕ ಗದ್ದೆ ಕೆಲಸಕ್ಕೆ ಹೋಗುವುದಾಗಿ ತಿಳಿಸಿ ಮನೆಯಿಂದ ಹೊರಟಿದ್ದ ಕಾರ್ತಿಕ್ ವಾಪಸ್ ಮನೆಗೆ ಬಾರದೇ ಇದ್ದುದರಿಂದ ಸಂಜೆಯ ವೇಳೆ ಸಹೋದರರು ಗದ್ದೆ, ತೋಟದ ಬಳಿ ಹೋಗಿ ಹುಡುಕಾಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ವೇಳೆ ಗದ್ದೆಯ ಬಳಿಯಿರುವ ಕೆರೆಯಲ್ಲಿ ಕಾರ್ತಿಕ್ ಅವರ ಚಪ್ಪಲಿ ತೇಲುತ್ತಿತ್ತು ಎನ್ನಲಾಗಿದೆ.

ಅನುಮಾನಗೊಂಡು ಅಗ್ನಿಶಾಮಕ ದಳದವರಿಗೆ ತಿಳಿಸಿದ್ದು, ಅಗ್ನಿಶಾಮಕ ದಳದವರು ಆಗಮಿಸಿ ಕೆರೆಯಲ್ಲಿ ಶೋಧ ನಡೆಸಿದಾಗ ಮೃತದೇಹ ಪತ್ತೆಯಾಗಿದೆ.

ಕೃಷಿ ಚಟುವಟಿಕೆಗಾಗಿ ಗದ್ದೆ ಕೆಲಸಕ್ಕೆ ಹೋದ ಕಾರ್ತಿಕ್ ಕೆರೆಯ ಬದಿಯಲ್ಲಿರುವ ಕಾಲುದಾರಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಲುಜಾರಿ, ಕೆರೆಗೆ ಬಿದ್ದಿರಬಹುದೆಂದು ಕುಟುಂಸ್ಥರು ಶಂಕೆ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಬೈಂದೂರು ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.