Sunday, January 19, 2025
ಸುದ್ದಿ

ಬೆಳ್ತಂಗಡಿ: ಆಕಸ್ಮಿಕವಾಗಿ ಬಾವಿಗೆ ಬಿದ್ದು ಕೊನೆಯುಸಿರೆಳೆದ ಯುವಕ – ಕಹಳೆ ನ್ಯೂಸ್

ಬೆಳ್ತಂಗಡಿ: ಯುವಕನೋರ್ವ ಆಕಸ್ಮಿಕವಾಗಿ ಬಾವಿಗೆ ಬಿದ್ದು ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ತಾಲೂಕಿನ ಕಲ್ಮಂಜ ಎಂಬಲ್ಲಿ ನಡೆದಿದೆ.

ಕಲ್ಮಂಜ ಗ್ರಾಮದ ಆರ್ಲ ನಿವಾಸಿ ಕೃಷ್ಣಪ್ಪ ಪೂಜಾರಿ (35) ಬಾವಿಗೆ ಬಿದ್ದು ಮೃತಪಟ್ಟ ದುರ್ದೈವಿ.

ಜಾಹೀರಾತು
ಜಾಹೀರಾತು
ಜಾಹೀರಾತು

ಮೇಸ್ತ್ರಿ ಕೆಲಸ ಮಾಡುತ್ತಿದ್ದ ಕೃಷ್ಣಪ್ಪ ಪೂಜಾರಿ ಮಂಗಳವಾರ ರಾತ್ರಿ ಸುಮಾರು ಎಂಟು ಗಂಟೆಯ ವೇಳೆ ಮನೆಯಿಂದ ನಾಪತ್ತೆಯಾಗಿದ್ದರು ಎನ್ನಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಮನೆ ಮಂದಿ ಸುತ್ತಮುತ್ತ ಎಲ್ಲೆಡೆ ಹುಡುಕಾಟ ನಡೆಸಿದರೂ ಅವರು ಪತ್ತೆಯಾಗಿರಲಿಲ್ಲ. ಆದರೆ ನಿನ್ನೆ ಸಂಜೆ ಅವರ ಮೃತದೇಹವು ಬಾವಿಯಲ್ಲಿ ತೇಲಾಡುತ್ತಿರುವುದು ಕಂಡುಬಂದಿದೆ.

ಆಕಸ್ಮಿಕವಾಗಿ ಬಾವಿಗೆ ಬಿದ್ದು ಮೃತಪಟ್ಟಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.