Recent Posts

Monday, January 20, 2025
ಸುದ್ದಿ

ಸುರತ್ಕಲ್: ಲಾರಿ – ಬೈಕ್ ನಡುವೆ ಡಿಕ್ಕಿ : ಲಾರಿ ಚಕ್ರದಡಿ ಸಿಲುಕಿ ಬೈಕ್ ಸವಾರ ಮೃತ್ಯು- ಕಹಳೆ ನ್ಯೂಸ್

ಸುರತ್ಕಲ್: ಗೋವಿಂದ ದಾಸ ಕಾಲೇಜು ಮುಂಭಾಗದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಬೈಕ್ ಸವಾರನೋರ್ವ ಲಾರಿಯ ಚಕ್ರದಡಿ ಸಿಲುಕಿ ಮೃತಪಟ್ಟ ಘಟನೆ ನಿನ್ನೆ ರಾತ್ರಿ ನಡೆದಿದೆ.ಮೃತರನ್ನು ಕಟಪಾಡಿ ಮಟ್ಟು ನಿವಾಸಿ ಅಕ್ಷಯ್ (33) ಎಂದು ಗುರುತಿಸಲಾಗಿದೆ.

ಅಕ್ಷಯ್ ಅವರು ಮಂಗಳೂರುಕಡೆಯಿಂದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಟಪಾಡಿಯ ತನ್ನ ಮನೆಗೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದರು. ಈ ವೇಳೆ ಸುರತ್ಕಲ್ ಗೋವಿಂದ ದಾಸ ಕಾಲೇಜು ಮುಂಭಾಗದಲ್ಲಿ ಲಾರಿಯ ಚಕ್ರದಡಿಗೆ ಸಿಲುಕಿ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಮಾಹಿತಿ ತಿಳಿದ ಮಂಗಳೂರು ಉತ್ತರ ಸಂಚಾರ ವಿಭಾಗದ ಪೆÇಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ ಹಾಗೂ ಉಂಟಾದ ಸಂಚಾರ ದಟ್ಟನೆಯನ್ನು ನಿಯಂತ್ರಿಸಿ ಸುಗಮ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟಿದ್ದಾರೆ. ಕಟಪಾಡಿ ಮೂಡಬೆಟ್ಟು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪೂಜಾ ಕೈಂಕರ್ಯ ನಡೆಸುತ್ತಿದ್ದ ಅಕ್ಷಯ್ ಸುರತ್ಕಲ್ ನಲ್ಲಿ ಪೂಜೆ ಮುಗಿಸಿ ಕಟಪಾಡಿಗೆ ಹಿಂದುರುಗಿ ಬರುತ್ತಿರುವ ವೇಳೆ ಘಟನೆ ನಡೆದಿದೆ. ಈ ಬಗ್ಗೆ ಮಂಗಳೂರು ಉತ್ತರ ಸಂಚಾರ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು