ಪುತ್ತೂರಿನ ವಿವೇಕಾನಂದ ಕಾಲೇಜಿನಲ್ಲಿ ಸಪ್ತಪರ್ಣೋತ್ಸವ ದಿನ : ಜಗತ್ತಿಗೆ ಶಾಂತಿ ಮಂತ್ರವನ್ನು ಬಿತ್ತಿದ ಮಹಾನ್ ವ್ಯಕ್ತಿ ಸ್ವಾಮಿ ವಿವೇಕಾನಂದರು- ಕಿಶೋರ್ ಕುಮಾರ್ ಕೊಡ್ಗಿ – ಕಹಳೆ ನ್ಯೂಸ್
ಪುತ್ತೂರು: ವಿವೇಕಾನಂದರ ಹೆಸರು ಕೇಳಿದ ಕೂಡಲೇ ಮೈ ರೋಮಾಂಚನಗೊಳ್ಳುತ್ತದೆ. ಇಡೀ ಜಗತ್ತಿಗೆ ಶಾಂತಿಯ ಮಂತ್ರವನ್ನು ಬಿತ್ತಿದ ಮಹಾನ್ ವ್ಯಕ್ತಿ ಎಂದರೆ ಸ್ವಾಮಿ ವಿವೇಕಾನಂದರು. ಇಂತಹ ಅದ್ಭುತ ವ್ಯಕ್ತಿಯ ಜೀವನವನ್ನು ವಿದ್ಯಾರ್ಥಿಗಳೆಲ್ಲರೂ ಅಧ್ಯಯನ ಮಾಡಿ ಅವರಲ್ಲಿ ಇದ್ದಂತಹ ಆದರ್ಶಗಳನ್ನು, ಮೌಲ್ಯಗಳನ್ನು ಕಡ್ಡಾಯವಾಗಿ ಮೈಗೂಡಿಸಿಕೊಳ್ಳಬೇಕು ಹಾಗೂ ಸಂತ ವಿವೇಕಾನಂದರ0ತಹ ಅಪೂರ್ವ ವ್ಯಕ್ತಿತ್ವ ವಿದ್ಯಾರ್ಥಿಗಳೆಲ್ಲರಿಗೂ ಮಾದರಿ. ಸ್ವಾಮಿ ವಿವೇಕಾನಂದರ ಶ್ರೇಷ್ಠ ಚಿಂತನೆಗಳು ನಮಗೆಲ್ಲರಿಗೂ ಸ್ಫೂರ್ತಿಯಾಗಬೇಕು.ಆಗ ನಮ್ಮೊಳಗಿನ ವ್ಯಕ್ತಿತ್ವವೂ ಅದ್ಭುತವಾಗಿ ವಿಕಸನಗೊಳ್ಳುತ್ತದೆ ಎಂದು ಮಂಗಳೂರಿನ ಕ್ಯಾಂಪ್ಕೋ ಸಂಸ್ಥೆಯ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ಹೇಳಿದರು.
ಇವರು ಪುತ್ತೂರಿನ ವಿವೇಕಾನಂದ ವಿದ್ಯಾರ್ಥಿ ಸಂಘದ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಶುಕ್ರವಾರ ಮಾತನಾಡಿದರು. ವಿದ್ಯಾರ್ಥಿ ಸಂಘ ಎಂದರೆ ಭವಿಷ್ಯದ ರಾಷ್ಟ್ರ ನಾಯಕರ ಸಂಘ.ವಿದ್ಯಾರ್ಥಿ ನಾಯಕರು ನಾಯಕತ್ವವನ್ನು ಬೆಳೆಸಿಕೊಂಡು ದೇಶಕ್ಕೆ ಮಾದರಿಯಾಗಬೇಕು.ಜ್ಙಾನದೊಂದಿಗೆ ಆತ್ಮವಿಶ್ವಾಸವನ್ನು ಹೆಚ್ಚಿಸಿಕೊಳ್ಳುವುದರ ಜೊತೆಗೆ ಸಮಾಜಸೇವೆಯನ್ನು ಮಾಡಲು ತಯಾರಾಗಬೇಕು .ಅಂತೆಯೇ ಶಿಕ್ಷಣವನ್ನು ಅಧ್ಯಯನ ಮಾಡುವುದರ ಜೊತೆಗೆ ಯುವಜನತೆ ಕೃಷಿಯ ಬಗೆಗೂ ಆಸಕ್ತಿ ನೀಡಿದರೆ ಉತ್ತಮ.ಯಾಕೆಂದರೆ ಕೃಷಿಯಿಂದಲೂ ಅತ್ಯಂತ ಸಂತೃಪ್ತಿಯ ಜೀವನ ನಡೆಸಲು ಸಾಧ್ಯ ಎಂದು ಅಭಿಪ್ರಾಯಪಟ್ಟರು.
ಈ ಸಂದರ್ಭದಲ್ಲಿ ವಿವೇಕಾನಂದ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಡಾ.ಶ್ರೀಪತಿ ಕಲ್ಲೂರಾಯ ಮಾತನಾಡಿ, ವಿವೇಕಾನಂದ ಕಾಲೇಜು ಬಹಳಷ್ಟು ವರ್ಷಗಳಿಂದ ಶೈಕ್ಷಣಿಕವಾಗಿ, ಸಾಂಸ್ಕೃತಿಕವಾಗಿ ಅನೇಕ ಸಾಧನೆಗಳನ್ನು ಮಾಡಿಕೊಂಡು ಬಂದಿದೆ.ಒ0ದಷ್ಟು ಶೈಕ್ಷಣಿಕ ಒತ್ತಡಗಳ ಮಧ್ಯೆಯೂ ಈ ಬಾರಿಯೂ ಕಾಲೇಜು ರಾಷ್ಟ್ರ ಮಟ್ಟದಲ್ಲಿ ಗುರುತಿಸಿಕೊಂಡಿರುವುದು ಹೆಮ್ಮೆಯ ಸಂಗತಿಯಾಗಿದೆ.ಅ0ತೆಯೇ ವಿದ್ಯಾರ್ಥಿಗಳೆಲ್ಲರೂ ತಮ್ಮ ಭವಿಷ್ಯ ವನ್ನು ರೂಪಿಸಿಕೊಳ್ಳುವಲ್ಲಿಯೂ ಯಶಸ್ವಿಯಾಗಲಿ ಎಂದು ಶುಭಹಾರೈಸಿದರು.
ಈ ಸಂದರ್ಭದಲ್ಲಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡಿದ್ದ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ.ಕೆ.ಎಂ ಕೃಷ್ಣ ಭಟ್ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಉತ್ತಮ ಜೀವನಕ್ಕಾಗಿ ಚಾಣಕ್ಯನ ಸೂತ್ರಗಳನ್ನು ಅನುಸರಿಸಬೇಕು.ಏಕಾಗ್ರತೆ ಹಾಗೂ ಪ್ರಾಮಾಣಿಕತೆಯನ್ನು ಮೈಗೂಡಿಸಿಕೊಳ್ಳಬೇಕು.ಅಲ್ಲದೇ ಯಾವುದೇ ಕೆಟ್ಟ ಚಟಗಳಿಂದ ಸಮಾಜದ ಅಗೌರವಕ್ಕೆ ಪಾತ್ರರಾಗದೆ ಉತ್ತಮ ವ್ಯಕ್ತಿಯಾಗಿ ಸಮಾಜದಲ್ಲಿ ರೂಪುಗೊಳ್ಳಬೇಕು ಎಂದು ಸಲಹೆ ನೀಡಿದರು.
ವಿಕಸನ ಪತ್ರಿಕೆ ಬಿಡುಗಡೆ : ಈ ಸಂದರ್ಭದಲ್ಲಿ ಪದವಿ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ವಿದ್ಯಾರ್ಥಿಗಳು ರೂಪಿಸಿದ ವಿಕಸನ ಎನ್ನುವ ಪ್ರಾಯೋಗಿಕ ಪತ್ರಿಕೆಯನ್ನು ಬಿಡುಗಡೆಗೊಳಿಸಲಾಯಿತು.
ಬಹುಮಾನ ವಿತರಣೆ: ಕಾರ್ಯಕ್ರಮದಲ್ಲಿ ಪದವಿ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳಿಗಾಗಿ ಕಾಲೇಜು ವಾರ್ಷಿಕೋತ್ಸವದ ಪ್ರಯುಕ್ತ ಆಯೋಜಿಸಲಾದ ಸಾಂಸ್ಕೃತಿಕ ಹಾಗೂ ಕ್ರೀಡಾ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನವಿತರಿಸಲಾಯಿತು.ಜೊತೆಗೆ ಪ್ರಸಕ್ತ ಸಾಲಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದಲ್ಲಿ ಕ್ರೀಡೆಯಲ್ಲಿ ಭಾಗವಹಿಸಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಸನ್ಮಾನ ಮಾಡಲಾಯಿತು. ಪ್ರತಿಭಾವಂತ ವಿದ್ಯಾರ್ಥಿಗಳಿಗೆ ದತ್ತಿನಿಧಿ ಬಹುಮಾನವನ್ನು ವಿತರಿಸಲಾಯಿತು.
ವೇದಿಕೆಯಲ್ಲಿ ವಿವೇಕಾನಂದ ಕಾಲೇಜಿನ ಆಡಳಿತ ಮಂಡಳಿಯ ಸಂಚಾಲಕ ಮುರಳಿಕೃಷ್ಣ ಕೆ.ಎನ್, ಕಾಲೇಜಿನ ಪ್ರಾಂಶುಪಾಲ ಪ್ರೋ.ವಿಷ್ಣು ಗಣಪತಿ ಭಟ್, ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಕಾಲೇಜಿನ ಆಡಳಿತ ಮಂಡಳಿಯ ಸದಸ್ಯರು, ಉಪನ್ಯಾಸಕ ವೃಂದ, ಉಪನ್ಯಾಸಕೇತರ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು
ವಿದ್ಯಾರ್ಥಿ ಸಂಘದ ಅಧ್ಯಕ್ಷ ವಚನ್ ಶೆಟ್ಟಿ ವಾರ್ಷಿಕ ವರದಿ ವಾಚಿಸಿದರು. ಜತೆಕಾರ್ಯದರ್ಶಿ ತನುಶ್ರೀ ಬೆಳ್ಳಾರೆ ಸ್ವಾಗತಿಸಿ, ಕಾರ್ಯದರ್ಶಿ ಆಶೀಶ್ ಎನ್.ಎಂ ವಂದಿಸಿದರು.ಕನ್ನಡ ವಿಭಾಗದ ಉಪನ್ಯಾಸಕಿ ಡಾ.ಗೀತಾಕುಮಾರಿ ಟಿ ಹಾಗೂ ರಸಾಯನ ಶಾಸ್ತ್ರ ವಿಭಾಗದ ಉಪನ್ಯಾಸಕಿ ಪ್ರೀತಿ ಭಟ್ ಕಾರ್ಯಕ್ರಮ ನಿರೂಪಿಸಿದರು. ನಂತರ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.