Monday, January 27, 2025
ಸುದ್ದಿ

ಹೊಂಡ ತಪ್ಪಿಸಲು ಹೋಗಿ ರಸ್ತೆಯಿಂದ ಗದ್ದೆಗೆ ಉರುಳಿದ ಕಾರು –ಕಹಳೆ ನ್ಯೂಸ್

ಉಡುಪಿ: ಕಟಪಾಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಂಡಿ ತಪ್ಪಿಸಲು ಹೋಗಿ ಕಾರೊಂದು ಗದ್ದೆಗೆ ಉರುಳಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಚಾಲಕ ಅಪಾಯದಿಂದ ಪಾರಾಗಿದ್ದಾನೆ.

ಉಡುಪಿ ಕಟಪಾಡಿಯ ರಾಷ್ಟ್ರೀಯ ಹೆದ್ದಾರಿ 66ರ ಕಲ್ಲಾಪು ಸಮೀಪ ಉಡುಪಿಯಿಂದ ಪಡುಬಿದ್ರೆ ಕಡೆಗೆ ಹೋಗುತ್ತಿರುವ ಕಾರು ಹೆದ್ದಾರಿ ಯಲ್ಲಿರುವ ಹೊಂಡವನ್ನು ತಪ್ಪಿಸಲು ಹೋಗಿ ರಸ್ತೆಯಿಂದ ಗದ್ದೆಗೆ ಉರುಳಿದೆ. ಕಾರು ಚಲಾಯಿಸುತ್ತಿದ್ದ ಪತ್ರಿಕಾ ವರದಿಗಾರ ಹಮೀದ್ ಪಡುಬಿದ್ರಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಘಟನೆಯಲ್ಲಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾಪು ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಕಾರನ್ನು ಕ್ರೇನ್‌ ಮೂಲಕ ಮೇಲಕ್ಕೆತ್ತಲಾಗಿದೆ.