Sunday, November 24, 2024
ದಕ್ಷಿಣ ಕನ್ನಡಪುತ್ತೂರುಸುದ್ದಿ

ನರೇಂದ್ರ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಪ್ರತಿಭಾ ಅನಾವರಣ ಕಾರ್ಯಕ್ರಮ “ತರಂಗ-2022”- ಉದ್ಘಾಟನೆ – ಕಹಳೆ ನ್ಯೂಸ್

ಪುತ್ತೂರು : “ವಿದ್ಯಾರ್ಥಿಗಳಲ್ಲಿ ಕಲೆ,ಸಾಹಿತ್ಯ ಮತ್ತು ಸಂಸ್ಕøತಿಯನ್ನು ಇಂದಿನ ಯುವಜನತೆಗೆ ಪರಿಚಯಿಸುವ ಈ ಕಾರ್ಯಕ್ರಮ ಅರ್ಥಪೂರ್ಣವಾಗಿದೆ. ಶೈಕ್ಷಣಿಕ ಕಾಲ ಘಟ್ಟದಲ್ಲಿ ಪಠ್ಯದ ಜೊತೆಗೆ ಇನ್ನಿತರ ಚಟುವಟಿಕೆಗಳಲ್ಲಿ ನಮ್ಮನ್ನು ಹೆಚ್ಚು ಸಕ್ರಿಯರಾಗಿಸುವ ಬಗ್ಗೆ ಚಿಂತನೆ ನಡೆಸಬೇಕಾಗಿದೆ. ಇಂತಹ ಕಾರ್ಯಕ್ರಮಗಳಲ್ಲಿ ಹೆಚ್ಚು ಭಾಗವಹಿದ್ದಲ್ಲಿ ವಿದ್ಯಾರ್ಥಿಗಳು ಕ್ರಿಯಾತ್ಮಕ ಯೋಚನೆಗಳಿಗೆ ತಮ್ಮನ್ನು ತೆರೆದುಕೊಳ್ಳುತ್ತಾರೆ.”ಎಂದು ಖ್ಯಾತ ಶಾಸ್ತ್ರೀಯ ಸಂಗೀತ ಗಾಯಕರು ಮತ್ತು ಮೃದಂಗ ವಾದಕರಾಗಿರುವ ಕಾಂಚನ ಈಶ್ವರ ಭಟ್ ರವರು ಹೇಳಿದರು.

ನರೇಂದ್ರ ಪ.ಪೂ.ಕಾಲೇಜಿನಲ್ಲಿ ನಡೆದ ವಿದ್ಯಾರ್ಥಿಗಳ ಪ್ರತಿಭಾ ಅನಾವರಣ ಕಾರ್ಯಕ್ರಮ “ತರಂಗ-2022 ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು .

ಜಾಹೀರಾತು
ಜಾಹೀರಾತು
ಜಾಹೀರಾತು

“ಸೋಲು ಗೆಲುವು ಶಾಶ್ವತವಲ್ಲ ಎಂಬ ಸತ್ಯದ ಅರಿವಿನೊಡನೆ ಮುನ್ನಡೆಯಿರಿ.ಅವಕಾಶಗಳನ್ನು ಉತ್ತಮ ಅಭಿಲಾಷೆಯೊಂದಿಗೆ ನಿಮ್ಮದಾಗಿಸಿಕೊಳ್ಳಿ ಮತ್ತು ಈ ದೇಶದ ಉತ್ತಮ ನಾಗರಿಕರಾಗಿ ಬಾಳಿ” ಎಂದು ಹೇಳಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಕಾರ್ಯಕ್ರಮದ ಅದ್ಯಕ್ಷತೆಯನ್ನು ವಹಿಸಿದ ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು(ರಿ.) ಇದರ ಜೊತೆ ಕಾರ್ಯದರ್ಶಿಗಳಾದ ಶ್ರೀಮತಿ ರೂಪಲೇಖ ರವರು ಮಾತನಾಡುತ್ತಾ,”ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಯನ್ನು ಅನಾವರಣಗೊಳಿಸಲು ಇದೊಂದು ಉತ್ತಮ ವೇದಿಕೆಯಾಗಿದೆ. ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಾದ ಸಾಹಿತ್ಯ, ಸಂಗೀತ, ನೃತ್ಯ, ನಾಟಕ ಮುಂತಾದ ಸೃಜನಾತ್ಮಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಾಗ ಮಾತ್ರ ಉತ್ತಮ ವ್ಯಕ್ತಿತ್ವ ಮತ್ತು ಉಜ್ವಲ ಭವಿಷ್ಯ ನಿರ್ಮಾಣ ಸಾಧ್ಯ.ಹೊಸ ಹೊಸತಾದ ವಿಚಾರಗಳು ,ಸಂಶೋಧನೆಗಳು ಜೀವನಕ್ಕೆ ಹೊಸ ರೂಪಗಳನ್ನು ಕೊಡುತ್ತದೆ. ”ಎಂದು ಹೇಳಿದರು.
ವೇದಿಕೆಯಲ್ಲಿ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀಕಾಂತ ಕೊಳತ್ತಾಯ , ಪುತ್ತೂರಿನ ಶ್ರೀ ಮೂಕಾಂಬಿಕಾ ಕಲ್ಚರಲ್ ಅಕಾಡೆಮಿಯ ಸಂಗೀತ ಮತ್ತು ನೃತ್ಯಗುರುಗಳಾದ ವಿದುಷಿ ಪ್ರೀತಿಕಲಾ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಪುತ್ತೂರಿನ ವಿಶ್ವಕಲಾ ನಿಕೇತನ ನೃತ್ಯ ಕಲಾ ಶಾಲೆಯ ನೃತ್ಯಗುರುಗಳಾದ ಕರ್ನಾಟಕ ಕಲಾ ಶ್ರೀ ವಿದುಷಿ ನಯನ ವಿ ರೈ ಭಾಗವಹಿಸಿದ್ದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಪ್ರಸಾದ್ ಶ್ಯಾನಭಾಗ್ ಸ್ವಾಗತಿಸಿ,ಉಪನ್ಯಾಸಕರಾದ ಶ್ರೀಮತಿ ರೇಖಾ ವಂದಿಸಿದರು. ಶ್ರೀಮತಿ ರೇಣುಕಾ ಕಾರ್ಯಕ್ರಮವನ್ನು ನಿರೂಪಿಸಿದರು. ಕೊನೆಗೆ ವಿದ್ಯಾರ್ಥಿಗಳಿಂದ ನಡೆದ ಸಾಂಸ್ಕøತಿಕ ಕಾರ್ಯಕ್ರಮ ಎಲ್ಲರ ಮನಸೆಳೆಯಿತು.ಜಾನಪದ ನೃತ್ಯ, ವೀರಗಾಸೆ, ಭರತನಾಟ್ಯ, ಕೋಲಾಟ, ಯಕ್ಷಗಾನ ಮೊದಲಾದ ಕಲಾ ಪ್ರಕಾರಗಳನ್ನು ಪ್ರದರ್ಶಿಸಿದರು.

ಕೊನೆಗೆ ನಡೆದ ಸಮಾರೋಪ ಸಮಾರಂಭದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ವಿದ್ಯಾರ್ಥಿಗಳ ತಂಡಕ್ಕೆ ಬಹುಮಾನವನ್ನು ನೀಡಲಾಯಿತು. ಉಪನ್ಯಾಸಕರಾದ ಶ್ರೀಮತಿ ಮಧುರಾ ಕಾರ್ಯಕ್ರಮವನ್ನು ನಿರೂಪಿಸಿದರು.