Recent Posts

Monday, January 20, 2025
ಸುದ್ದಿ

ಜು. 26ರಂದು ಕಾರ್ಗಿಲ್ ವಿಜಯ ದಿನಾಚರಣೆ : ಪುತ್ತೂರಿಗೆ ಚಕ್ರವರ್ತಿ ಸೂಲಿಬೆಲೆ – ಕಹಳೆ ನ್ಯೂಸ್

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಪುತ್ತೂರು: ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳು, ಪುತ್ತೂರಿನ ಮಾಜಿ ಸೈನಿಕರ ಸಂಘ ಹಾಗೂ ಅಮರ್ ಜವಾನ್ ಜ್ಯೋತಿ ಸಂರಕ್ಷಣಾ ಸಮಿತಿ ಆಶ್ರಯದಲ್ಲಿ ಜುಲೈ 26ರಂದು ಬೆಳಗ್ಗೆ 9 ಗಂಟೆಗೆ ಕಿಲ್ಲೆ ಮೈದಾನದ ಬಳಿ ಇರುವ ಅಮರ್ ಜವಾನ್ ಜ್ಯೋತಿ ಸ್ಮಾರಕದ ಎದುರು ಕಾರ್ಗಿಲ್ ವಿಜಯ ದಿನಾಚರಣೆ ನಡೆಯಲಿದೆ.

ಕಾರ್ಯಕ್ರಮದ ಪ್ರಧಾನ ಭಾಷಣಕಾರರಾಗಿ ಯುವಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಆಗಮಿಸಲಿದ್ದಾರೆ.
ಮಾಜಿ ಸೈನಿಕರ ಸಂಘದ ಅಧ್ಯಕ್ಷ ರಾಮಚಂದ್ರ ಪುಚ್ಚೇರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಪುತ್ತೂರಿನ ಶಾಸಕರಾದ ಸಂಜೀವ ಮಠಂದೂರು, ನಗರಸಭೆ ಅಧ್ಯಕ್ಷ ಜೀವಂಧರ್ ಜೈನ್, ಉಪಾಧ್ಯಕ್ಷೆ ವಿದ್ಯಾಗೌರಿ, ಸಹಾಯಕ ಆಯುಕ್ತ ಗಿರೀಶ್ ನಂದನ್, ನಗರ ಸಭೆ ಆಯುಕ್ತ ಮಧು ಎಸ್ ಮನೋಹರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ ಉಪಸ್ಥಿತಲಿರಲಿದ್ದಾರೆ.