Saturday, November 23, 2024
ದಕ್ಷಿಣ ಕನ್ನಡಬಂಟ್ವಾಳಶಿಕ್ಷಣ

ಶೈಕ್ಷಣಿಕ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ವಿಶೇಷ ಸಾಧನೆಗೈದ ಏಮಾಜೆ ಕಿರಿಯ ಪ್ರಾಥಮಿಕ ಶಾಲಾ ಸಹಶಿಕ್ಷಕಿ ಶ್ರೀಮತಿ ತ್ರಿವೇಣಿಯವರಿಗೆ ಗೌರವ ಡಾಕ್ಟರೇಟ್ ಪದವಿ – ಕಹಳೆ ನ್ಯೂಸ್

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಶೈಕ್ಷಣಿಕ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ವಿಶೇಷ ಸಾಧನೆಗೈದ ಬಂಟ್ವಾಳ ತಾಲ್ಲೂಕು, ದ.ಕ.ಜಿ.ಪಂ.ಕಿ.ಪ್ರಾ.ಶಾಲೆ ಏಮಾಜೆ ಇದರ ಸಹಶಿಕ್ಷಕಿ ಶ್ರೀಮತಿ ತ್ರಿವೇಣಿಯವರಿಗೆ ಜುಲೈ 24ರಂದು ಗೋವಾದಲ್ಲಿ ರೆಜೆನ್ಸಿ ಇಂಟರ್ ನ್ಯಾಷನಲ್ ಥಿಯೋಲಾಜಿಕಲ್ ಯೂನಿವರ್ಸಿಟಿ ಒಂಟಾರಿಯೋ, ಕೆನಡಾದ ವತಿಯಿಂದ ಗೌರವ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ.
ಬಂಟ್ವಾಳ ತಾಲ್ಲೂಕು ಮೆಲ್ಕಾರ್ ಶಾಖೆಯ ಮೆಸ್ಕಾಂ ಉದ್ಯೋಗಿ ಮುಜಲ ರಮೇಶ್ ಪೂಜಾರಿಯವರ ಧರ್ಮ ಪತ್ನಿಯಾಗಿರುವ ತ್ರಿವೇಣಿಯವರು ಕಳೆದ 15 ವರ್ಷಗಳಿಂದ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿರುವ ಮಾತ್ರವಲ್ಲದೇ, ಹಲವಾರು ಸಾಮಾಜಿಕ ಸೇವಾ ಕಾರ್ಯಗಳಲ್ಲೂ ತಮ್ಮನ್ನು ತಾವು ತೊಡಗಿಸಿಕೊಂಡಿರುವ ಇವರು 2019- 20ನೇ ಸಾಲಿನ ಜಿಲ್ಲಾಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿಗೆ ಬಾಜನರಾಗಿದ್ದಾರೆ.