Recent Posts

Monday, January 20, 2025
ಸಿನಿಮಾ

ಜುಲೈ 28ಕ್ಕೆ ವಿಶ್ವದಾದ್ಯಂತ 3,200ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ತೆರೆಕಾಣಲಿದೆ ‘ವಿಕ್ರಾಂತ್ ರೋಣ’ – ಕಹಳೆ ನ್ಯೂಸ್

ಕಿಚ್ಚ ಸುದೀಪ್ ನಟನೆಯ ಪ್ಯಾನ್ ಇಂಡಿಯಾ ಸಿನಿಮಾ ‘ವಿಕ್ರಾಂತ್ ರೋಣ’ ಬಿಡುಗಡೆ ಹೊಸ್ತಿಲಲ್ಲಿದೆ. ಜುಲೈ 28ಕ್ಕೆ ವಿಶ್ವದಾದ್ಯಂತದ 3,200ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಸಿನಿಮಾ ತೆರೆಕಾಣಲಿದೆ ಎಂದು ಚಿತ್ರದ ನಿರ್ಮಾಪಕ ಜಾಕ್ ಮಂಜು ಮಾಹಿತಿ ನೀಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ನಿರ್ಮಾಪಕ ಜಾಕ್ ಮಂಜು

‘ಕರ್ನಾಟಕದಲ್ಲಿ ಸದ್ಯ 390 ಚಿತ್ರಮಂದಿರಗಳು ಬುಕ್ ಆಗಿವೆ. ಜುಲೈ 28ರ ವೇಳೆಗೆ 400-425 ಚಿತ್ರಮಂದಿರಗಳಲ್ಲಿ ಸಿನಿಮಾ ತೆರೆಕಾಣಲಿದೆ. ವಿಶ್ವದಾದ್ಯಂತ 3,200 ಚಿತ್ರಮಂದಿರಗಳಲ್ಲಿ ವಿಕ್ರಾಂತ್ ರೋಣ ತೆರೆಕಾಣಲಿದ್ದು, ಹಿಂದಿಯಲ್ಲೇ ಇಲ್ಲಿಯವರೆಗೆ 900 ಪರದೆಗಳು ಬುಕ್ ಆಗಿವೆ. ಈ ಪೈಕಿ ಶೇ 90ರಷ್ಟು 3ಡಿ ಚಿತ್ರಮಂದಿರಗಳೇ ಇವೆ. ಆಂಧ್ರ ಪ್ರದೇಶ ಮತ್ತು ತೆಲಂಗಾಣದಲ್ಲಿ ಕರ್ನಾಟಕಕ್ಕಿಂತ ಹೆಚ್ಚಿನ ಚಿತ್ರಮಂದಿರಗಳಲ್ಲಿ ಚಿತ್ರ ತೆರೆಕಾಣುವ ಸಾಧ್ಯತೆ ಇದೆ. ದಕ್ಷಿಣ ಭಾರತದಲ್ಲೇ ಈ ರಾಜ್ಯಗಳಲ್ಲಿ ಅತಿ ಹೆಚ್ಚು ಚಿತ್ರಮಂದಿರಗಳಲ್ಲಿ ಸಿನಿಮಾ ತೆರೆಕಾಣಲಿದೆ’ ಎಂದರು.

‘ಸರ್ಕಾರ ನಿಗದಿಪಡಿಸಿದಂತೆಯೇ ಗುರುವಾರ, ಶುಕ್ರವಾರ ಟಿಕೆಟ್ ದರ ₹236 ಇರಲಿದ್ದು, ವಾರಾಂತ್ಯದಲ್ಲಿ ಕೊಂಚ ಹೆಚ್ಚಾಗಬಹುದು. 3ಡಿಗೆ ಟಿಕೆಟ್‍ನ ಮೇಲೆ ದರ ಕೊಂಚ ಹೆಚ್ಚಿರಲಿದೆ.
ಪಾಕಿಸ್ತಾನದಲ್ಲೂ ‘ವಿಕ್ರಾಂತ್ ರೋಣ’ ಶೋ
‘ದುಬೈನಲ್ಲಿ ಜುಲೈ 27ಕ್ಕೆ 5 ಪರದೆಗಳಲ್ಲಿ 5 ‘ಭಾಷೆಗಳಲ್ಲಿ ಪ್ರೀಮಿಯರ್ ಶೋ ನಡೆಯಲಿದೆ. ಒಟ್ಟು 27 ದೇಶಗಳಲ್ಲಿ ಜುಲೈ 27ಕ್ಕೆ ಪ್ರೀಮಿಯರ್ ಶೋ ನಡೆಯಲಿದ್ದು, ಸುಮಾರು 30-31 ದೇಶಗಳಲ್ಲಿ ವಿಕ್ರಾಂತ್ ರೋಣ ತೆರೆಕಾಣಲಿದೆ. ಪಾಕಿಸ್ತಾನದಲ್ಲಿ ಕಳೆದ ಮೂರು ತಿಂಗಳಿಂದ ಭಾರತದ ಸಿನಿಮಾಗಳು ಪ್ರದರ್ಶನ ಕಾಣುತ್ತಿದ್ದು, ಇಲ್ಲೂ ಸಿನಿಮಾ ರಿಲೀಸ್ ಮಾಡುವ ಬಗ್ಗೆ ಚರ್ಚೆ ನಡೆಯುತ್ತಿದೆ’ ಎಂದು ಜಾಕ್ ಮಂಜು ಮಾಹಿತಿ ನೀಡಿದರು.