Monday, November 25, 2024
ಪುತ್ತೂರುಸುದ್ದಿ

ನರೇಂದ್ರ ಪದವಿ ಪೂರ್ವ ಕಾಲೇಜಿನಲ್ಲಿ ಕಾರ್ಗಿಲ್ ವಿಜಯ್ ದಿವಸ್ ಆಚರಣೆ- ಕಹಳೆ ನ್ಯೂಸ್

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಪುತ್ತೂರು: “ಕಾರ್ಗಿಲ್ ಯುದ್ಧ ಗೆದ್ದ ಸಂಭ್ರಮವೇ ಕಾರ್ಗಿಲ್ ವಿಜಯ್ ದಿವಸ್. ಪಾಕಿಸ್ತಾನದ ಭಯೋತ್ಪಾದಕರನ್ನು ಬಗ್ಗು ಬಡಿದು ವಿಜಯ ಸಾಧಿಸಿದ ದಿನ. ದೇಶ ಸೇವೆಯ ಪವಿತ್ರ ಕೈಂಕರ್ಯಕ್ಕೆ ತಮ್ಮ ಜೀವನವನ್ನು ಮುಡಿಪಾಗಿಟ್ಟ ಅದೆಷ್ಟೋ ವೀರ ಯೋಧರು ನಮ್ಮ ಕಣ್ಣ ಮುಂದೆ ಮಿಂಚಿ ಮರೆಯಾಗ್ತಾರೆ. ಗಡಿ ಕಾಯುವ ಸೈನಿಕ ಎಂದೂ ತನ್ನ ಭವಿಷ್ಯದ ಬಗ್ಗೆ ಚಿಂತಿಸೋದಿಲ್ಲ. ಬದಲಾಗಿ ತನ್ನ ದೇಶ ,ತನ್ನ ಜನರು ಅನ್ನೋ ಅಭಿಮಾನದಿಂದ ರಾತ್ರಿ ಹಗಲು ಎನ್ನದೇ ದುಡಿಯುತ್ತಾನೆ. ರಾಷ್ಟ್ರಪ್ರೇಮವನ್ನು ಮೈಗೂಡಿಸಿಕೊಂಡವನಿಂದ ಮಾತ್ರವೇ ಇದು ಸಾಧ್ಯ.”ಎಂದು ವಿವೇಕಾನಂದ ಪದವಿ ಕಾಲೇಜಿನ ಪ್ರಥಮ ಬಿ.ಎಸ್‍ಸಿ.ಯ ಸೀನಿಯರ್ ಅಂಡರ್ ಆಫಿಸರ್ ಹೇಮಸ್ವಾತಿ ಹೇಳಿದರು.
ನರೇಂದ್ರ ಪದವಿ ಪೂರ್ವ ಕಾಲೇಜಿನಲ್ಲಿ ಕಾರ್ಗಿಲ್ ವಿಜಯೋತ್ಸವದ ಆಚರಣೆ ಸಂದರ್ಭದಲ್ಲಿ ಮಾತನಾಡುತ್ತಿದ್ದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ನರೇಂದ್ರ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಪ್ರಸಾದ್ ಶ್ಯಾನಭಾಗ್ ಮಾತನಾಡುತ್ತಾ ,”ಭಾರತೀಯ ಸೈನ್ಯದ ಶೌರ್ಯ, ಸೈನಿಕರ ಸಾಹಸವನ್ನು ಜಗತ್ತಿಗೆ ಪರಿಚಯಿಸಿದ್ದು ಕಾರ್ಗಿಲ್ ಯುದ್ಧ. ಹೀಗಾಗಿ ಪ್ರತಿ ವರ್ಷ ಜುಲೈ 26 ರಂದು ಕಾರ್ಗಿಲ್ ವಿಜಯ್ ದಿವಸ್ ಸಂಭ್ರಮದಿಂದ ಭಾರತೀಯರು ಆಚರಿಸುತ್ತಾರೆ.ಅಂತಹ ಮಹಾನ್ ಸೈನಿಕರಿಗೆ ಗೌರವ ನೀಡುವುದು ನಮ್ಮ ಆದ್ಯ ಕರ್ತವ್ಯ .”ಎಂದು ಹೇಳಿದರು. ಸಮಾರಂಭದಲ್ಲಿ ಉಪನ್ಯಾಸಕರಾದ ಶ್ರೀಮತಿ ಮಧುರಾ ಸ್ವಾಗತಿಸಿ, ವಂದಿಸಿದರು.