Sunday, January 19, 2025
ರಾಜಕೀಯ

Breaking News : ಬಜೆಟ್ ನಲ್ಲಿ ಕರಾವಳಿ ಭಾಗಕ್ಕೆ ಅನ್ಯಾಯ ; ಸದನದಲ್ಲಿ ಸಿಡಿದೆದ್ದ ಸಿಡಿಲಮರಿ ಹರೀಶ್ ಪೂಂಜ – ಕಹಳೆ ನ್ಯೂಸ್

ಬೆಂಗಳೂರು(ಜು.5): ಸಿಎಂ ಕುಮಾರಸ್ವಾಮಿ ಇಂದು ವಿಧಾನಸಭೆಯಲ್ಲಿ ಮಂಡಿಸುತ್ತಿರುವ ಬಜೆಟ್ ನಲ್ಲಿ ಕೂಡ ರಾಜಕೀಯ ವೈಷಮ್ಯ ಸುಳಿದಂತೆ ಕಾಣುತ್ತಿದೆ. ಕಾರಣ ಮಂಡ್ಯ, ಹಾಸನ ಸೇರಿದಂತೆ ಹಲವು ಜಿಲ್ಲೆಗಳಿಗೆ  ಭರಪೂರ ಕೊಡುಗೆ ನೀಡಿರುವ ಸಿಎಂ ಕುಮಾರಸ್ವಾಮಿ, ಕಳೆದ ಚುನಾವಣೆಯಲ್ಲಿ ಜೆಡಿಎಸ್ ಗೆ ವೋಟು ಹಾಕದ ಕರಾವಳಿ ಮತ್ತು ಮಲೆನಾಡು ಭಾಗಕ್ಕೆ ಯಾವುದೇ ಯೋಜನೆ ಘೊಷಣೆ ಮಾಡಿಲ್ಲ.

ಜಾಹೀರಾತು
ಜಾಹೀರಾತು
ಜಾಹೀರಾತು

ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಅಭಿವೃದ್ಧಿಗೆ ಪ್ರಸಕ್ತ ಬಜೆಟ್ ನಲ್ಲಿ ಯಾವುದೇ ಯೋಜನೆ ಘೊಷಣೆ ಮಾಡಿಲ್ಲ. ಆದರೆ ಜೆಡಿಎಸ್ ಗೆ ಭಾರೀ ಬೆಂಬಲ ನೀಡಿದ್ದ ಮಂಡ್ಯ, ಹಾಸನ ರಾಮನಗರ ಜಿಲ್ಲೆಗಳಿಗೆ ಭರಪೂರ ಕೊಡುಗೆ ಘೋಷಿಸಿ ಸಿಎಂ ತಾರತಮ್ಯದ ಪ್ರದರ್ಶನ ಮಾಡಿದ್ದಾರೆ ಎಂಬ ಅನುಮಾನ ಕಾಡುತ್ತಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಕುರಿತು ಬಿಜೆಪಿಯ ಕರಾವಳಿಯ ಫಯರ್ ಬ್ರಾಂಡ್ ಶಾಸಕ ಸಿಡಿಲಮರಿ ಹರೀಶ್ ಪೂಂಜ ಸಿಡಿದೆದ್ದಿದ್ದಾರೆ. ಸಿ.ಎಂ. ನಡೆಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಪೂಂಜ ಮುಖ್ಯಮಂತ್ರಿಗಳು ಕರಾವಳಿ ಭಾಗಕ್ಕೆ ಭಾರಿದೊಡ್ಡ ಅನ್ಯಾಯ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.