Tuesday, January 21, 2025
ಉಡುಪಿ

ಸೆಂಟ್ರಲ್ ಕೋಸ್ಟಲ್ ಅಗ್ರಿಕಲ್ಚರಲ್ ರಿಸರ್ಚ್ ಇನ್ಸ್ಟಿಟ್ಯೂಟ್’ ಆಡಳಿತ ಸಮಿತಿ ಸದಸ್ಯರಾಗಿ ಶಿವಕುಮಾರ್ ಅಂಬಲಪಾಡಿ ನಾಮ ನಿರ್ದೇಶನ – ಕಹಳೆ ನ್ಯೂಸ್

ಉಡುಪಿ: ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ರವರ ಶಿಫಾರಸು ಮೇರೆಗೆ‌‌ ಬಿಜೆಪಿ ಜಿಲ್ಲಾ ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ ಇವರನ್ನು ಕೇಂದ್ರ ಸರಕಾರದ ಸ್ವಾಮ್ಯದ “ಸೆಂಟ್ರಲ್ ಕೋಸ್ಟಲ್ ಅಗ್ರಿಕಲ್ಚರಲ್ ರಿಸರ್ಚ್ ಇನ್ಸ್ಟಿಟ್ಯೂಟ್‌‌” ಗೋವಾ ಇದರ‌ ‘ಇನ್ಸ್ಟಿಟ್ಯೂಟ್ ಮೆನೇಜ್ಮೆಂಟ್ ಕಮಿಟಿ’ ಸದಸ್ಯರನ್ನಾಗಿ ನಾಮ ನಿರ್ದೇಶನ ಮಾಡಿ ‘ಇಂಡಿಯನ್ ಕೌನ್ಸಿಲ್ ಆಫ್ ಅಗ್ರಿಕಲ್ಚರಲ್ ರಿಸರ್ಚ್’ ನವದೆಹಲಿ‌‌ ಆದೇಶ ಹೊರಡಿಸಿದೆ

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಇವರು ಅಂಬಲಪಾಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾಗಿ, ತಲಾ ಎರಡು ಅವಧಿಗೆ ಗ್ರಾಮ ಪಂಚಾಯತ್ ಸದಸ್ಯರಾಗಿ, ಬಿಜೆಪಿ ಅಂಬಲಪಾಡಿ ಸ್ಥಾನೀಯ ಸಮಿತಿ ಕಾರ್ಯದರ್ಶಿಯಾಗಿ, ಬಿಜೆಪಿ ಉಡುಪಿ ನಗರ ಹಿಂದುಳಿದ ವರ್ಗಗಳ ಮೋರ್ಚಾದ ಉಪಾಧ್ಯಕ್ಷರಾಗಿ, ಚುನಾವಣಾ ನಿರ್ವಹಣಾ ಸಮಿತಿ ಸದಸ್ಯರಾಗಿ ಸೇವೆ ಸಲ್ಲಿಸಿದ್ದು, ಪ್ತಸಕ್ತ ಎರಡನೇ ಅವಧಿಗೆ ಬಿಜೆಪಿ ಜಿಲ್ಲಾ ಸಹ ವಕ್ತಾರರಾಗಿ ಹಾಗೂ ಬಿಜೆಪಿ ಹೆರ್ಗ ಮಹಾ ಶಕ್ತಿಕೇಂದ್ರದ ಪ್ರಭಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಕರ್ನಾಟಕ ಅಸೋಸಿಯೇಶನ್ ಆಫ್ ಬಾಡಿ ಬಿಲ್ಡರ್ಸ್ ಇದರ ಜತೆ ಕಾರ್ಯದರ್ಶಿಯಾಗಿ, ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ(ರಿ.) ಇದರ ಗೌರವ ಸಲಹೆಗಾರರಾಗಿ, ಜಿಲ್ಲಾ ಭಜನಾ ಮಂಡಳಿಗಳ ಒಕ್ಕೂಟದ ಪ್ರಧಾನ ಕಾರ್ಯದರ್ಶಿಯಾಗಿ, ರೋಟರಿ ಕ್ಲಬ್ ಅಂಬಲಪಾಡಿ ಇದರ ಅತ್ಯುತ್ತಮ ಕ್ಲಬ್ ಪ್ರಶಸ್ತಿ ವಿಜೇತ ಕಾರ್ಯದರ್ಶಿಯಾಗಿ, ರೋಟರಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿರುವ ಇವರು ಪ್ರಸಕ್ತ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ – ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಉಡುಪಿ ಜಿಲ್ಲಾ ಸಮಿತಿ ಸದಸ್ಯರಾಗಿ, ಉಡುಪಿ ಜಿಲ್ಲಾ ಬಾಡಿ ಬಿಲ್ಡರ್ಸ್ ಅಸೋಸಿಯೇಶನ್ ಉಪಾಧ್ಯಕ್ಷರಾಗಿ, ಬಾಡಿ ಬಿಲ್ಡಿಂಗ್‌ ರಾಜ್ಯ ತೀರ್ಪುಗಾರರಾಗಿ, ಶ್ರೀ ಬ್ರಹ್ಮ ಬೈದೇರುಗಳ ಗರೋಡಿ(ರಿ.) ಕಲ್ಮಾಡಿ ಇದರ ಆಡಳಿತ ಸಮಿತಿಯ ಸಂಘಟನಾ ಕಾರ್ಯದರ್ಶಿಯಾಗಿ, ಬಿಲ್ಲವ ಸೇವಾ ಸಂಘ(ರಿ.) ಅಂಬಲಪಾಡಿ ಇದರ ಉಪಾಧ್ಯಕ್ಷರಾಗಿ, ಶ್ರೀ ಬಬ್ಬುಸ್ವಾಮಿ ದೈವಸ್ಥಾನ (ಪಡುಪಾಲು) ಅಂಬಲಪಾಡಿ ಇದರ ಪ್ರಧಾನ ಕಾರ್ಯದರ್ಶಿಯಾಗಿ, ಶ್ರೀ ರಾಮಾಂಜನೇಯ ಪೂಜಾ ಮಂದಿರ ಅಂಬಲಪಾಡಿ ಇದರ ಸಂಚಾಲಕರಾಗಿ, ಅಂಗನವಾಡಿ ಕೇಂದ್ರ ಬಂಕೇರ್ಕಟ್ಟ ಅಂಬಲಪಾಡಿ ಇದರ ಬಾಲವಿಕಾಸ ಸಮಿತಿ ಸದಸ್ಯರಾಗಿ ಸೇವೆ ಸಲ್ಲಿಸುವ ಜೊತೆಗೆ ಮಣಿಪಾಲ ಸಮೂಹ ಸಂಸ್ಥೆಯಲ್ಲಿ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.