Thursday, January 23, 2025
ಸುದ್ದಿ

ಪ್ರವೀಣ್ ಹತ್ಯೆ ಖಂಡಿಸಿ ಚಿಕ್ಕಮಗಳೂರು ಯುವ ಮೋರ್ಚಾ ಅಧ್ಯಕ್ಷ ಸೇರಿ ಸಾಮೂಹಿಕ ರಾಜೀನಾಮೆ – ಕಹಳೆ ನ್ಯೂಸ್

ಚಿಕ್ಕಮಗಳೂರು: ಬೆಳ್ಳಾರೆಯಲ್ಲಿ ಹಿಂದು ಕಾರ್ಯಕರ್ತ, ಬಿಜೆಪಿ ನಾಯಕ ಪ್ರವೀಣ್ ನೆಟ್ಟಾರ್ ಹತ್ಯೆಗೆ ಸಂಬಂಧಿಸಿದಂತೆ ಇದೀಗ ಬಿಜೆಪಿ ಸರಕಾರಕ್ಕೆ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಪಕ್ಷದ ಕಾರ್ಯಕರ್ತರೇ ಬಿಸಿ ಮುಟ್ಟಿಸಿದ್ದಾರೆ

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಪ್ರವೀಣ್ ನೆಟ್ಟಾರು ಹತ್ಯೆಯನ್ನು ಖಂಡಿಸಿ ಬಿಜೆಪಿ ಚಿಕ್ಕಮಗಳೂರು ಜಿಲ್ಲಾ ಯುವ ಮೋರ್ಚಾದ ಜಿಲ್ಲಾಧ್ಯಕ್ಷ ಸಹಿತ ಜಿಲ್ಲೆಯ ಯುವ ಮೋರ್ಚಾದ ಎಲ್ಲಾ ಪದಾಧಿಕಾರಿಗಳು ಹಾಗೂ 9 ಮಂಡಲದ ಅಧ್ಯಕ್ಷರು ಸೇರಿ ಪಕ್ಷದ ಜವಾಬ್ದಾರಿಗಳಿಗೆ ಸಾಮೂಹಿಕ ರಾಜೀನಾಮೆ ನೀಡಿದ್ದಾರೆ.ತಾವು ರಾಜೀನಾಮೆ ನೀಡಿದ ಪತ್ರವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕಳುಹಿಸಿಕೊಟ್ಟಿದ್ದಾರೆ. ಜಿಲ್ಲಾ ಯುವ ಮೋರ್ಚಾದ ಅಧ್ಯಕ್ಷ ಸಂದೀಪ್ ಹರವಿನಗಂಡಿ ಅವರು ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದಾರೆ.ರಾತ್ರಿ ಸಮಯದಲ್ಲಿ ಬಂದು ಹಿಂದಿನಿಂದ ಹೊಡೆದಿರುವುದು ಹೇಡಿಗಳ ಕೃತ್ಯವಾಗಿದೆ. ಬಿಜೆಪಿಯ ಯುವ ಮೋರ್ಚಾ ಸಕ್ರಿಯ ಕಾರ್ಯಕರ್ತನಾಗಿ ಸೇವೆಗೋಸ್ಕರ ತೊಡಗಿಸಿದ್ದ ಹುಡುಗ ಇಂದು ಸಮಾಜಕ್ಕೆ ಪ್ರಾಣವನ್ನು ತೆತ್ತಿದ್ದಾನೆ. ಇದು ದುರ್ದೈವದ ಸಂಗತಿ ಎಂದು ಹೇಳಿರುವ ಸಂದೀಪ್, ಸರಕಾರ ಆರೋಪಿಗಳನ್ನು ಬಂಧಿಸಿ ಉಗ್ರ ಶಿಕ್ಷೆಯನ್ನು ನೀಡಬೇಕು.ಮತ್ತೆ ಮುಂದಿನ ದಿನಗಳಲ್ಲಿ ಇಂತಹ ಘಟನೆ ನಡೆಯದಂತೆ ಎಚ್ಚರಿಕೆ ವಹಿಸಬೇಕು ಎಂದಿದ್ದಾರೆ.

ಇನ್ನು ಈ ಬಗ್ಗೆ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಅಮಾಯಕನ ಕೊಲೆ ಆದಾಗ ಎಲ್ಲರಿಗೂ ಆಕ್ರೋಶ ಇರುತ್ತದೆ.ಆದಷ್ಟು ಬೇಗನೇ ಕೊಲೆ ಆರೋಪಿಗಳನ್ನು ಬಂಧಿಸಲು ಕ್ರಮ ಕೈಗೊಳ್ಳಲಾಗುವುದು. ಘಟನೆ ಕೇರಳದ ಗಡಿ ಪ್ರದೇಶದಲ್ಲಿ ನಡೆದಿರುವ ಕಾರಣ ಆರೋಪಿಗಳು ಗಡಿ ಪ್ರದೇಶದ ಮೂಲಕ ಆಗಮಿಸಿ ಕೃತ್ಯ ಎಸಗಿ ಪರಾರಿಯಾಗಿದ್ದಾರೆ.ಇದು ವ್ಯವಸ್ಥಿತ ಸಂಚು. ಆರೋಪಿಗಳನ್ನು ಬಂಧಿಸಲು ಗಡಿ ದಾಟಿಯೂ ತನಿಖೆಗೆ ಪೊಲೀಸರು ಮುಂದಾಗಿದ್ದಾರೆ. ಗೃಹ ಸಚಿವರು ಎಸ್ಪಿಯವರಿಗೆ ಸೂಕ್ತ ತನಿಖೆಗೆ ಸೂಚನೆ ನೀಡಿದ್ದಾರೆ ಎಂದರು.