Thursday, January 23, 2025
ಸುದ್ದಿ

ದಕ್ಷಿಣ ಕನ್ನಡ ಜಿಲ್ಲೆ ಭೇಟಿಗೆ ಶ್ರೀರಾಮಸೇನೆ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ್‌ಗೆ ನಿಷೇಧ – ಕಹಳೆ ನ್ಯೂಸ್

ಉಡುಪಿ : ದ.ಕ ಜಿಲ್ಲೆಯ ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟಾಗುವ ಹಿನ್ನೆಲೆಯಲ್ಲಿ ಶ್ರೀರಾಮಸೇನೆ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಅವರಿಗೆ, ದಕ್ಷಿಣ ಕನ್ನಡ ಜಿಲ್ಲೆ ಭೇಟಿಯನ್ನು ನಿಷೇಧಿಸಿ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಆದೇಶ ಹೊರಡಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಇಲಾಖೆ ವ್ಯಾಪ್ತಿಯ ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, ಕಡಬ ಮತ್ತು ಸುಳ್ಯ ತಾಲೂಕುಗಳಿಗೆ ಪ್ರಮೋದ್ ಮುತಾಲಿಕ್ ಪ್ರವೇಶಕ್ಕೆ ನಿಷೇಧ ಹೇರಲಾಗಿದೆ. ಜಿಲ್ಲೆಯ ಪ್ರಸ್ತುತ ವಿದ್ಯಮಾನಗಳು ಮತ್ತು ಹಾಗೂ ಪ್ರಮೋದ್ ಮುತಾಲಿಕ್ ಹಿಂದಿನ ಪ್ರಚೋದನಾಕಾರಿ ಹೇಳಿಕೆ ಹಿನ್ನಲೆ, ಕೋಮು ಸೌಹಾರ್ದತೆಗೆ ಧಕ್ಕೆ ಉಂಟಾಗಿರುವುದನ್ನು ಪರಿಗಣಿಸಿ, ಮುತಾಲಿಕ್ ಜಿಲ್ಲೆ ಪ್ರವೇಶ ನಿಷೇಧಿಸಬೇಕು ಎಂದು ಜಿಲ್ಲೆಯ ಪೊಲೀಸ್ ಅಧೀಕ್ಷಕರು ಮನವಿ ಮಾಡಿದ್ರು. ಅದರಂತೆ ಮನವಿ ಪುರಸ್ಕರಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ. ಅವರು ಈ ಆದೇಶ ಹೊರಡಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು