Thursday, January 23, 2025
ಸುದ್ದಿ

ಕರಾವಳಿಯಲ್ಲಿ ಸರಣಿ ಹತ್ಯೆ: ಇಂದು ಅಧಿಕಾರಿಗಳೊಂದಿಗೆ ಸಿಎಂ ಸಭೆ – ಕಹಳೆ ನ್ಯೂಸ್

ಸುರತ್ಕಲ್‌ನ ಪಾಝಿಲ್ ಕೊಲೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಪೊಲೀಸ್ ಇಲಾಖೆ ತನಿಖೆ ತೀವ್ರಗೊಳಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ಕೇವಲ ಕೊಲೆಯಲ್ಲ, ಇದೊಂದು ಪೂರ್ವನಿಯೋಜಿತ ಕೃತ್ಯ ಎಂಬುದು ಮೇಲ್ನೋಟಕ್ಕೆ ಕಂಡುಬರುತ್ತಿದೆ. ಇದುವರೆಗೆ ಯಾವುದೇ ಮಾಹಿತಿ ಸಿಕ್ಕಿಲ್ಲ. ಅಧಿಕಾರಿಗಳಿಂದ ಮಾಹಿತಿ ಪಡೆಯುತ್ತೇನೆ ಎಂದರು.

ಸರ್ಕಾರ ಕರಾವಳಿ ಭಾಗದಲ್ಲಿ‌ ನಡೆದ ಮೂರೂ ಹತ್ಯೆ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿದೆ. ಮುಂದಿನ ನಿರ್ಧಾರಕ್ಕಾಗಿ ಇಂದು ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆಗೆ ಸಭೆ ನಡೆಸುತ್ತೇವೆ ಎಂದ ಮುಖ್ಯಮಂತ್ರಿಗಳು, ಫಾಜಿಲ್ ಹತ್ಯೆಯನ್ನು ನಾನು ಕೇವಲ ಕೊಲೆ ಎಂದು ನೋಡುತ್ತಿಲ್ಲ. ಇದರ ಹಿಂದಿರುವ ಸತ್ಯಾಂಶ ಬಯಲಿಗೆಳೆಯಲಾಗುವುದು ಎಂದರು.