Recent Posts

Monday, January 20, 2025
ಸುದ್ದಿ

ಕಾಸರಗೋಡಿಗೆ ತೆರಳುತ್ತಿದ್ದ ಬಸ್‌ನಲ್ಲಿ ಲಕ್ಷ ಲಕ್ಷ ರೂ. ಹಣ ಪತ್ತೆ- ಕಹಳೆ ನ್ಯೂಸ್

ಮಂಗಳೂರಿನಿಂದ ಕಾಸರಗೋಡಿಗೆ ತೆರಳುತ್ತಿದ್ದ ಬಸ್ ವೊಂದರಲ್ಲಿ ದಾಖಲೆಗಳಿಲ್ಲದೆ ಕೊಂಡೊಯ್ಯಲಾಗುತ್ತಿದ್ದ ಬರೋಬ್ಬರಿ 36.47 ಲಕ್ಷ ರೂ. ನಗದು ಹಣ ಪತ್ತೆಯಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಮಂಜೇಶ್ವರ ಚೆಕ್ ಪೋಸ್ಟ್ ನಲ್ಲಿ ಶುಕ್ರವಾರ ಅಬಕಾರಿ ದಳದ ಸಿಬಂದಿಗಳು ನಡೆಸಿದ ಕಾರ್ಯಾಚರಣೆಯಲ್ಲಿ ಈ ಹಣ ವಶಪಡಿಸಿಕೊಳ್ಳಲಾಗಿದ್ದು, ಈ ಸಂಬಂಧ ಓರ್ವನನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.

ಪ್ರಾಥಮಿಕ ತನಿಖೆಯಲ್ಲಿ ಆರೋಪಿಯನ್ನು ಮಹಾರಾಷ್ಟ್ರ ಸಾಂಗ್ಲಿ ಮೂಲದ ಗೋಪಾಲ್ ಎಂದು ಗುರುತಿಸಲಾಗಿದೆ. ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ.