Sunday, November 24, 2024
ಸುದ್ದಿ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಆರೋಪಿಗಳು ಪೊಲೀಸ್ ಕಸ್ಟಡಿಗೆ: ಗೌಪ್ಯ ಸ್ಥಳದಲ್ಲಿ ವಿಚಾರಣೆ..!! – ಕಹಳೆ ನ್ಯೂಸ್

ಮಂಗಳೂರು: ಬೆಳ್ಳಾರೆಯಲ್ಲಿ ನಡೆದ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಆರೋಪಿಗಳನ್ನು ನ್ಯಾಯಾಲಯವು ಐದು ದಿನಗಳ ಕಸ್ಟಡಿಗೆ ಒಪ್ಪಿಸಿದೆ. ಆರೋಪಿಗಳನ್ನು ಪೊಲೀಸರು ಗೌಪ್ಯ ಸ್ಥಳದಲ್ಲಿರಿಸಿ ವಿಚಾರಣೆ ನಡೆಸುತ್ತಿದ್ದಾರೆಂಬ ಮಾಹಿತಿ ಲಭ್ಯವಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಪ್ರವೀಣ್ ಹತ್ಯೆ ನಡೆದ ಒಂದೇ ದಿನದಲ್ಲಿ ಆರೋಪಿಗಳಾದ ಜಾಕಿರ್ ಮತ್ತು ಶಫೀಕ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಅಲ್ಲದೆ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಕಸ್ಟಡಿಗೆ ನೀಡುವಂತೆ ಪೊಲೀಸರು ಮನವಿ ಮಾಡಿಕೊಂಡಿದ್ದರು.
ನ್ಯಾಯಾಲಯವು ಅವರನ್ನು ಐದು ದಿನಗಳ ಕಾಲ ಕಸ್ಟಡಿಗೆ ಒಪ್ಪಿಸಿ ಆದೇಶ ಹೊರಡಿಸಿದೆ.

ಬೆಳ್ಳಾರೆಯಲ್ಲಿ ಮಸೂದ್ ಕೊಲೆ ನಡೆದ ಎರಡು ದಿನಗಳ ಬಳಿಕ ಪ್ರವೀಣ್ ನೆಟ್ಟಾರು ಅವರನ್ನು ದುಷ್ಕ,ರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಕೊಲೆಗೈದಿದ್ದರು. ಈ ಹತ್ಯೆಯು ಇಡೀ ಕರಾವಳಿಯನ್ನೇ ಕೆರಳಿಸಿತ್ತಲ್ಲದೇ, ಬಳಿಕ ಪ್ರತಿಭಟನೆಯ ಕಿಚ್ಚು ರಾಜ್ಯದ ವಿವಿಧೆಡೆಗೂ ಹರಡಿತ್ತು. ಆರೋಪಿಗಳ ಶೀಘ್ರ ಬಂಧನ ಮತ್ತು ಕಠಿಣ ಕ್ರಮಕ್ಕಾಗಿ ಒತ್ತಾಯಿಸಿ ಹಿಂದೂಸಂಘಟನೆಗಳ ಕಾರ್ಯಕರ್ತರು ಬೀದಿಗಿಳಿದಿದ್ದರು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಪೊಲೀಸರು ಆರೋಪಿಗಳಾದ ಜಾಕಿರ್‍ ಮತ್ತು ಶಫೀಕ್‌ನನ್ನು ಘಟನೆ ನಡೆದ ಒಂದೇ ದಿನದಲ್ಲಿ ಬಂಧಿಸಿದ್ದರು. ಹಂತಕರ ಪತ್ತೆಗೆ ಕೇರಳದಲ್ಲಿ ಶೋಧ ಕಾರ್ಯ ಮುಂದುವರಿದಿದೆ.