Tuesday, January 21, 2025
ಸುದ್ದಿ

ಸೆಂಟ್ರಲ್ ಕೋಸ್ಟಲ್ ಅಗ್ರಿಕಲ್ಚರ್ ರಿಸರ್ಚ್ ಇನ್ಸ್ಟಿಟ್ಯೂಟ್ ಮೆನೇಜ್ಮೆಂಟ್ ಕಮಿಟಿ ಸದಸ್ಯರಾಗಿ ನಾಮ ನಿರ್ದೇಶನಗೊಂಡಿರುವ ಬಿಜೆಪಿ ಜಿಲ್ಲಾ ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ ಇವರಿಗೆ ಜಿಲ್ಲಾ ಬಿಜೆಪಿ ವತಿಯಿಂದ ಅಭಿನಂದನೆ – ಕಹಳೆ ನ್ಯೂಸ್

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಉಡುಪಿ: ಕೇಂದ್ರ ಸರಕಾರದ ಕೃಷಿ ಮತ್ತು ರೈತರ‌ ಕಲ್ಯಾಣ ಸಚಿವಾಲಯದ ಸುಪರ್ದಿಯಲ್ಲಿರುವ ಸೆಂಟ್ರಲ್ ಕೋಸ್ಟಲ್ ಅಗ್ರಿಕಲ್ಚರ್ ರಿಸರ್ಚ್ ಇನ್ಸ್ಟಿಟ್ಯೂಟ್ ಮೆನೇಜ್ಮೆಂಟ್ ಕಮಿಟಿ ಸದಸ್ಯರಾಗಿ ನಾಮ ನಿರ್ದೇಶನಗೊಂಡಿರುವ ಬಿಜೆಪಿ ಜಿಲ್ಲಾ ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ ಇವರನ್ನು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಜಿಲ್ಲಾ ಬಿಜೆಪಿ ವತಿಯಿಂದ ಶಾಲು ಹೊದೆಸಿ ಅಭಿನಂದಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಹಾಗೂ ಮೈಸೂರು ಇಲೆಕ್ಟ್ರಿಕಲ್ ಇಂಡಸ್ಟ್ರೀಸ್ ಮಂಡಳಿ ಅಧ್ಯಕ್ಷ ಕೆ.ಉದಯ ಕುಮಾರ್ ಶೆಟ್ಟಿ, ಬಿಜೆಪಿ ಉಡುಪಿ ನಗರಾಧ್ಯಕ್ಷ ಮಹೇಶ್ ಠಾಕೂರ್, ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ರವಿ ಅಮೀನ್, ಶ್ರೀಶ ನಾಯಕ್ ಪೆರ್ಣಂಕಿಲ, ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ರಾಜ್ಯ ಅಲ್ಪಸಂಖ್ಯಾತ ಮೋರ್ಚಾ ಕಾರ್ಯದರ್ಶಿ ಸಲೀಂ ಅಂಬಾಗಿಲು, ಬಿಜೆಪಿ ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್ ಆತ್ರಾಡಿ,‌ ಜಿಲ್ಲಾ ಒಬಿಸಿ ಮೋರ್ಚಾ ಅಧ್ಯಕ್ಷ ಸುರೇಂದ್ರ ಪಣಿಯೂರು, ಜಿಲ್ಲಾ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶರತ್ ಶೆಟ್ಟಿ ಉಪ್ಪುಂದ, ಜಿಲ್ಲಾ ಪ್ರಕೋಷ್ಠಗಳ ಸಂಯೋಜಕ ವಿಜಯ ಕುಮಾರ್ ಉದ್ಯಾವರ, ಜಿಲ್ಲಾ ಮಾಧ್ಯಮ ಪ್ರಕೋಷ್ಠ ಸಂಚಾಲಕ ಶ್ರೀನಿಧಿ ಹೆಗ್ಡೆ, ಬಿಜೆಪಿ ಕಾಪು ಮಂಡಲ ಪ್ರಧಾನ ಕಾರ್ಯದರ್ಶಿ ಗೋಪಾಲಕೃಷ್ಣ ರಾವ್ ಮಟ್ಟು ಉಪಸ್ಥಿತರಿದ್ದರು.