Sunday, January 19, 2025
ಕಡಬದಕ್ಷಿಣ ಕನ್ನಡಸುದ್ದಿಸುಬ್ರಹ್ಮಣ್ಯ

ಸುಬ್ರಹ್ಮಣ್ಯದಲ್ಲಿ ವರುಣನ ರುದ್ರ ನರ್ತನ ; ಗುಡ್ಡ ಜರಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು – ಮೃತಪಟ್ಟಿರುವ ಶಂಕೆ..! – ಕಹಳೆ ನ್ಯೂಸ್

ಸುಬ್ರಹ್ಮಣ್ಯ, ಆ 01 : ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನಲ್ಲಿ ಭಾರೀ ಮಳೆಯಾಗ್ತಾ ಇದೆ. ತಗ್ಗು ಪ್ರದೇಶಗಳು ಜಲಾವೃತಗೊಂಡಿದ್ದು, ಈ ನಡುವೆ ಕುಕ್ಕೆ ಸುಬ್ರಹ್ಮಣ್ಯದ ದೇವಸ್ಥಾನದ ಸಮೀಪದ ಪರ್ವತ ಮುಖಿ ಸಮೀಪ ಹೊಸೊಳಿಕೆ ಕುಸುಮಾಧರ ಅಂಗಡಿ ಅವರ ಮನೆಯ ಬರೆ ಕುಸಿದು ಎರಡು ಮಕ್ಕಳು ಮಣ್ಣಿನಡಿಗೆ ಸಿಲುಕಿದ್ದಾರೆ ಎಂದು ತಿಳಿದು ಬಂದಿದೆ.ಭಾರಿ ಮಳೆಯಿಂದ ಸುಬ್ರಹ್ಮಣ್ಯದ ಕುಮಾರಧಾರ ನದಿ ಜಲಾವೃತವಾಗಿದ್ದು ಇದೀಗ ಸ್ಥಳೀಯರಲ್ಲಿ ಭಾರಿ ಆತಂಕಕ್ಕೆ ಕಾರಣವಾಗಿದೆ. ಸದ್ಯ ಮಣ್ಣಿನಡಿಗೆ ಸಿಲುಕಿಕೊಂಡಿರುವ ಎರಡು ಮಕ್ಕಳನ್ನು ಹೊರಕ್ಕೆ ತೆಗೆಯಲು ಸ್ಥಳೀಯರು ಭಾರಿ ಪ್ರಯತ್ನ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.ಸುಬ್ರಹ್ಮಣ್ಯ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ. ಜೇಸಿಬಿ ತರಿಸಲಾಗ್ತಾ ಇದೆ. ಮಣ್ಣಿನಡಿ ಸಿಲುಕಿದವರನ್ನು ಹೊರತೆಗೆಯುವ ಪ್ರಯತ್ನ ಮುಂದುವರೆದಿದೆ. ಆದರೆ ಕುಮಾರಧಾರಾದಿಂದ ಪಂಜ ಕಡೆಗೆ ಹೋಗುವ ರಸ್ತೆ ನೆರೆ ನೀರಲ್ಲಿ ಪೂರ್ಣ ಮುಳುಗಿರುವುದರಿಂದ ಮತ್ತು ಮರ ಕೂಡ ಬಿದ್ದಿರುವುದರಿಂದ ರಸ್ತೆ ಬಂದ್ ಆಗಿದ್ದು ಪ
ಕಾರ್ಯಾಚಾಣೆಗೆ ಕಾರ್ಯಕ್ಕೆ ತೊಂದರೆ ಉಂಟಾಗಿದೆ 

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು