Tuesday, January 21, 2025
ದಕ್ಷಿಣ ಕನ್ನಡಸುದ್ದಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇನ್ನೆರಡು ದಿನ ರಾತ್ರಿ ನಿರ್ಬಂಧ ಮುಂದುವರಿಕೆ ; ಆಗಸ್ಟ್‌ 2 ರಿಂದ ಆಗಸ್ಟ್ 4ರ ವರೆಗೆ ರಾತ್ರಿ ನಿರ್ಬಂಧ ಆದೇಶ ಹೊರಡಿಸಿದ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. – ಕಹಳೆ ನ್ಯೂಸ್

ಮಂಗಳೂರು, ಆ 02 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಸ್ತುತ ಜಾರಿಯಲ್ಲಿರುವ ನಿರ್ಬಂಧಗಳನ್ನು ಪೊಲೀಸ್ ಇಲಾಖೆಯ ಕೋರಿಕೆಯ ಮೇಲೆ ಮತ್ತೆ ಎರಡು ದಿನಗಳ ಕಾಲ ವಿಸ್ತರಿಸಿ ಜಿಲ್ಲಾಡಳಿತ ಮಂಗಳವಾರ ಆದೇಶ ಹೊರಡಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಬೆಳ್ಳಾರೆ ಮತ್ತು ‌ಸುರತ್ಕಲ್‌ನಲ್ಲಿ ನಡೆದ ಕೊಲೆ ಕೃತ್ಯದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ತುರ್ತು ಸೇವೆಯನ್ನು ಹೊರತುಪಡಿಸಿ ಇತರ ಚಟುವಟಿಕೆಗಳಿಗೆ‌ ಆಗಸ್ಟ್‌ 2ರ ಸಂಜೆ 6 ಗಂಟೆಯಿಂದ ಆಗಸ್ಟ್ 4ರ ಮುಂಜಾನೆ 6 ರವರೆಗೆ ನಿರ್ಬಂಧ ಮುಂದುವರಿಸಲಾಗಿದೆ. ಈ ಸಮಯದಲ್ಲಿ ಜಿಲ್ಲೆಯಾದ್ಯಂತ ಅಂಗಡಿ-ಮುಂಗಟ್ಟು ಬಂದ್‌ ಮಾಡಬೇಕೆಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಆದೇಶಿಸಿದ್ದಾರೆ.ಜುಲೈ 29ರ ಸಂಜೆ 6 ಗಂಟೆಯಿಂದ ಆಗಸ್ಟ್‌ 1ರ ಮುಂಜಾನೆ 6ರವರೆಗೆ ಜಾರಿಯಲ್ಲಿದ್ದ ನಿರ್ಬಂಧವನ್ನು ಇದೀಗ ಮತ್ತೆರಡು ದಿನಗಳ ಕಾಲ ವಿಸ್ತರಣೆ ಮಾಡಲಾಗಿದೆ.
ಇನ್ನು ಬೆಳಗ್ಗೆನಿಂದ ಸಂಜೆ 6 ಗಂಟೆಯೊಳಗೆ ಎಂದಿನಂತೆ ವ್ಯಾಪಾರ ವಹಿವಾಟುಗಳು ನಡೆಯಲಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಈ ಆದೇಶವನ್ನು ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.ಯಾವುದೇ ಅಹಿತಕರ ಘಟನೆ ನಡೆಯದಂತೆ ತಡೆಯಲು ಮುನ್ನೆಚ್ಚರಿಕಾ ಕ್ರಮವಾಗಿ ವಿಧಿಸಲಾದ ನಿಷೇದಾಜ್ಞೆ ಆಗಸ್ಟ್‌ 6ರ ಮಧ್ಯರಾತ್ರಿ 12 ಗಂಟೆಯವರೆಗೆ ಜಾರಿಯಲ್ಲಿದೆ. ಗುಂಪು ಗೂಡುವುದು, ಸಭೆ, ಮೆರವಣಿಗೆ, ಸಮಾರಂಭಗಳನ್ನು ನಡೆಸುವುದು, ದೈಹಿಕ ಹಿಂಸೆಯನ್ನುಂಟು ಮಾಡುವ ವಸ್ತುಗಳನ್ನು ಒಯ್ಯುವುದು, ಪ್ರತಿಕೃತಿ ಪ್ರದರ್ಶನ, ಸಾರ್ವಜನಿಕ ಕೋಮು ಸೌಹಾರ್ದಕ್ಕೆ ಧಕ್ಕೆಯಾಗುವಂತಹ ಕೂಗು ಉಚ್ಚರಿಸುವುದು ಸೇರಿದಂತೆ ಯಾವುದೇ ಅಪರಾಧ ಎಸಗುವುದನ್ನು ನಿಷೇಧಾಜ್ಞೆ ಅವಧಿಯಲ್ಲಿ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿಯವರು ಸೂಚಿಸಿದ್ದಾರೆ.