Monday, January 20, 2025
ಸುದ್ದಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆಯಿಂದ ದ್ವಿಚಕ್ರ ವಾಹನ ಸವಾರರಿಗೆ ಹೊಸ ನಿಯಮ : ಹಿಂಬದಿ ಸವಾರರಿಗಿಲ್ಲ ಅವಕಾಶ : ಮಂಗಳೂರಿನಲ್ಲಿ ಎಡಿಜಿಪಿ ಅಲೋಕ್ ಕುಮಾರ್ – ಕಹಳೆ ನ್ಯೂಸ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆಯಿಂದ ದ್ವಿಚಕ್ರ ವಾಹನದಲ್ಲಿ ಹಿಂಬದಿ ಸವಾರರಿಗೆ ಅವಕಾಶ ಇಲ್ಲ ಎಂದು ಮಂಗಳೂರಿನಲ್ಲಿ ಎಡಿಜಿಪಿ ಅಲೋಕ್ ಕುಮಾರ್ ಹೇಳಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಮಂಗಳೂರು ನಗರ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಗೆ ನಿಯಮ ಅನ್ವಯವಾಗಲಿದೆ. 18 ವರ್ಷದ ಕೆಳಗಿನ ಮಕ್ಕಳು, ಹಿರಿಯ ನಾಗರಿಕರು ಮತ್ತು ಮಹಿಳೆಯರಿಗೆ ಇದರಲ್ಲಿ ವಿನಾಯಿತಿ ನೀಡಲಾಗಿದೆ. ಪುರುಷ ಹಿಂಬದಿ ಸವಾರರಿಗೆ ಈ ನಿಯಮ ಅನ್ವಯವಾಗಲಿದೆ.

ಕೆಲವು ಬಾರಿ ಹಿಂಬದಿ ಸವಾರರು ಸಮಸ್ಯೆ ಮಾಡ್ತಾರೆ. ಒಂದು ವಾರ ಈ ನಿಯಮ ಜಿಲ್ಲೆಯಲ್ಲಿ ಅನುಷ್ಠಾನ ಮಾಡಲಾಗುತ್ತದೆ ಎಂದಿದ್ದಾರೆ. ಬೇರೆ ರಾಜ್ಯದಲ್ಲೂ ಈ ನಿಯಮ ಜಾರಿ ಮಾಡಿದ್ದರು.ಆಗ ಎಲ್ಲಾ ಪುರುಷ ಸವಾರರಿಗೆ ಇಬ್ಬಿಬ್ಬರು ಸಂಚರಿಸೋದಕ್ಕೆ ಅವಕಾಶ ನೀಡಿರಲಿಲ್ಲ. ಇಲ್ಲಿ ಮಹಿಳೆಯರು, ಹಿರಿಯ ನಾಗರಿಕರು,ಮಕ್ಕಳಿಗೆ ರಿಯಾಯಿತಿ ನೀಡಲಾಗಿದೆ ಎಂದು ಮಂಗಳೂರಿನಲ್ಲಿ ಎಡಿಜಿಪಿ ಅಲೋಕ್ ಕುಮಾರ್ ಹೇಳಿದ್ದಾರೆ.