Recent Posts

Monday, January 20, 2025
ಸುದ್ದಿ

ಮಂಗಳೂರು: ಆ.5 ರಿಂದ ದ.ಕ ನಿರ್ಬಂಧ ಸಡಿಲಿಕೆ: ರಾತ್ರಿ 9ರ ವರೆಗೆ ಅಂಗಡಿ ಮುಂಗಟ್ಟು ತೆರೆಯಲು ಅವಕಾಶ – ಡಾ. ಕೆ.ವಿ ರಾಜೇಂದ್ರ ಆದೇಶ- ಕಹಳೆ ನ್ಯೂಸ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಹಿತಕರ ಘಟನೆ ತಡೆಯಲು ಮುಂಜಾಗ್ರತಾ ಕ್ರಮವಾಗಿ ಹೇರಲಾಗಿದ್ದ ನಿರ್ಬಂಧ ಕ್ರಮಗಳನ್ನು ಆ.5 ರಿಂದ ಮುಂದಿನ ಮೂರು ದಿನಗಳ ಕಾಲ ಕೊಂಚ ಸಡಿಲಿಕೆ ಮಾಡಿ ಜಿಲ್ಲಾಧಿಕಾರಿ ಡಾ. ಕೆ.ವಿ ರಾಜೇಂದ್ರ ಆದೇಶಿಸಿದ್ದಾರೆ

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಆ.5 ರಿಂದ ಅಂಗಡಿ ಮುಂಗಟ್ಟುಗಳನ್ನು ರಾತ್ರಿ 9ರ ವರೆಗೆ ತೆರೆಯಲು ಅವಕಾಶ ನೀಡಲಾಗಿದ್ದು , ಮದ್ಯದಂಗಡಿಗಳನ್ನು ನಾಳೆಯಿಂದ ಸಂಜೆ 6 ಗಂಟೆಯವರೆಗೆ ತೆರೆಯಲು ಅನುಮತಿ ನೀಡಲಾಗಿದೆ. 144 ಸೆಕ್ಷನ್ ಅಡಿಯಲ್ಲಿ ವಿಧಿಸಲಾದ ನಿಷೇಧಾಜ್ಞೆ ಹಾಗೂ ಇತರ ನಿರ್ಬಂಧಗಳು ಮೊದಲಿನಂತೆಯೇ ಮುಂದುವರಿಯಲಿದೆ.
ಜಿಲ್ಲೆಯಾದ್ಯಂತ ಅಹಿತಕರ ಘಟನೆ ನಿಯಂತ್ರಿಸುವ ಸಲುವಾಗಿ ಹಿರಿಯ ನಾಗರಿಕರು ಮತ್ತು ಮಕ್ಕಳನ್ನು, ಮಹಿಳೆಯರನ್ನು ಹೊರತುಪಡಿಸಿ ದ್ವಿಚಕ್ರ ವಾಹನ ಇಬ್ಬರು ಯುವಕರು ಸಂಚರಿಸುವುದನ್ನು ನಿಬರ್ಂಧಿಸಿ ಎಡಿಜಿಪಿ ಅಲೋಕ್ ಕುಮಾರ್ ಈಗಾಗಲೇ ಆದೇಶಿಸಿದ್ದರು.