Recent Posts

Monday, January 20, 2025
ದಕ್ಷಿಣ ಕನ್ನಡಸುದ್ದಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದ್ವಿಚಕ್ರ ವಾಹನದಲ್ಲಿ ಹಿಂಬದಿ ಸವಾರರಿಗೆ ಹೇರಲಾಗಿದ್ದ ನಿರ್ಬಂಧ ; 45 ನಿಮಿಷದಲ್ಲಿ ಆದೇಶ ವಾಪಾಸ್ ಪಡೆದ ಮಂಗಳೂರು ನಗರ ಆಯುಕ್ತ ಎನ್. ಶಶಿಕುಮಾರ್ – ಕಹಳೆ ನ್ಯೂಸ್

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದ್ವಿಚಕ್ರ ವಾಹನದಲ್ಲಿ ಹಿಂಬದಿ ಸವಾರರಿಗೆ ಹೇರಲಾಗಿದ್ದ ನಿರ್ಬಂಧವನ್ನು ಮತ್ತೆ ಹಿಂಪಡೆಯಲಾಗಿದೆ.
ಕೆಲವು ಗಂಟೆಗಳ ಹಿಂದೆ ಹಿರಿಯ ನಾಗರಿಕರು, ಮಕ್ಕಳು ಮತ್ತು ಮಹಿಳೆಯರನ್ನು ಹೊರತು ಪಡಿಸಿ ದ್ವಿಚಕ್ರದಲ್ಲಿ ಹಿಂಬದಿ ಸವಾರರಿಗೆ ನಿರ್ಬಂಧ ಹೇರುವ ಬಗ್ಗೆ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್ ಸೂಚಿಸಿದ್ದರು. ಬಳಿಕ ಮಂಗಳೂರು ನಗರ ಆಯುಕ್ತ ಎನ್. ಶಶಿಕುಮಾರ್ ಆದೇಶವನ್ನು ಹೊರಡಿಸಿದ್ದರು.
ಇದೀಗ 45 ನಿಮಿಷದಲ್ಲಿ ಆದೇಶವನ್ನು ವಾಪಾಸ್ ಪಡೆಯಲಾಗಿದೆ. ಇದರಿಂದ ವಾಹನ ಸವಾರರು ನಿರಾಳರಾಗಿದ್ದಾರೆ.
ನಿರ್ಬಂಧ ಕುರಿತ ಅಧಿಕೃತ ಆದೇಶ ಇನ್ನಷ್ಟೇ ಹೊರಬೀಳಬೇಕಿದೆ

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು