Recent Posts

Sunday, January 19, 2025
ಸುದ್ದಿ

ಯಾದಗಿರಿಯಲ್ಲಿ ಭೀಕರ ರಸ್ತೆ ಅಪಘಾತ : ಒಂದೇ ಕುಟುಂಬದ 6 ಜನರು ಸ್ಥಳದಲ್ಲೇ ಸಾವು -ಕಹಳೆ ನ್ಯೂಸ್

ಯಾದಗಿರಿ : ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಟ್ಯಾಂಕರ್, ಕಾರು ನಡುವೆ ಡಿಕ್ಕಿಯಾಗಿ 6 ಜನರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಯಾದಗಿರಿ ಜಿಲ್ಲೆಯ ಗುರುಮಠಕಲ್ ಬಳಿ ಭೀಕರ ಅಪಘಾತ ಸಂಭವಿಸಿದ್ದು, ಒಂದೇ ಕುಟುಂಬದ 6 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಟ್ಯಾಂಕರ್ ಹಾಗೂ ಕಾರು ನಡುವೆ ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ಒಂದೇ ಕುಟುಂಬದ 6 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತಪಟ್ಟವರನ್ನು ರಾಯಚೂರು ಜಿಲ್ಲೆ ಲಿಂಗಸೂಗುರು ತಾಲೂಕಿನ ಹಟ್ಟಿ ಪಟ್ಟಣದವರು ಎಂದು ಗುರುತಿಸಲಾಗಿದೆ. ತೆಲಂಗಾಣದ ಕೊಡಂಗಲ್ ಜವಳ ಕಾರ್ಯಕ್ಕೆ ಹೋಗಿದ್ದರು. ಈ ವೇಳೆ ಗುರುಮಠಕಲ್ ಬಳಿ ಟ್ಯಾಂಕರ್ ಗೆ ಕಾರು ಡಿಕ್ಕಿಯಾದ ಪರಿಣಾಮ 6 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಓರ್ವ ಬಾಲಕನ ಸ್ಥೀತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಗುರುಮಠಕಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.