Recent Posts

Monday, January 20, 2025
ಸುದ್ದಿ

ಕುಖ್ಯಾತ ಅಂತರ್‌ ರಾಜ್ಯ ಕಳ್ಳರ ಬಂಧನ- ಚಿನ್ನಾಭರಣ, ಕಾರು ಸಹಿತ 20ಲಕ್ಷ ರೂ. ಸೊತ್ತು ವಶ -ಕಹಳೆ ನ್ಯೂಸ್

ಉಡುಪಿ : ಮನೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಮೂವರು ಅಂತರಾಜ್ಯ ಕಳ್ಳರನ್ನು ಬ್ರಹ್ಮಾವರ ಪೊಲೀಸರು ಬಂಧಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಹೆಬ್ರಿಯ ಶಿವಪುರ ಗ್ರಾಮದ ಪ್ರಸ್ತುತ ಬೆಂಗಳೂರು ನಿವಾಸಿ ದಿಲೀಪ್ ಶೆಟ್ಟಿ , ತಮಿಳುನಾಡಿನ ಕೊಯಿಮುತ್ತೂರು ಮೂಲದ ರಾಜನ್, ಷಣ್ಮುಗಂ ಬಂಧಿತ ಆರೋಪಿಗಳು.

ಆರೋಪಿಗಳ ಪೈಕಿ ದಿಲೀಪ್ ಶೆಟ್ಟಿ ಹಾಗೂ ರಾಜನ್ ಇವರನ್ನು ವಿಚಾರಿಸಿದಾಗ ಬ್ರಹ್ಮಾವರ ಠಾಣಾ ಸರಹದ್ದಿನಲ್ಲಿ 2 ಮನೆ ಕಳ್ಳತನ, ಕಾರ್ಕಳ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ-1 ಮನೆ ಕಳ್ಳತನ ಹಾಗೂ ಅಜೆಕಾರು ಠಾಣಾ ವ್ಯಾಪ್ತಿಯಲ್ಲಿ 2 ಮನೆ ಕಳ್ಳತನ ನಡೆಸಿದ್ದು, ಸ್ವತ್ತು , ಚಿನ್ನಾಭರಣ ಕಳವು ಮಾಡಿರುವುದಾಗಿ ತಪ್ಪೊಪ್ಪಿಕೊಂಡಿದ್ದಾರೆ. ಹಾಗೂ ಬಂಧಿತ ಆರೋಪಿಗಳಿಂದ ಸುಮಾರು 13 ಲಕ್ಷ ರೂ.ಮೌಲ್ಯದ ಚಿನ್ನಾಭರಣ 20,000 ರೂ. ಮೌಲ್ಯದ 500 ಗ್ರಾಂ ಬೆಳ್ಳಿ ಆಭರಣಗಳು. ಕೃತ್ಯಕ್ಕೆ ಬಳಸಿದ 2 ಕಾರುಗಳನ್ನು ವಶಪಡಿಸಿಕೊಂಡಿದ್ದಾರೆ.

ಜು.29 ರಂದು ಬ್ರಹ್ಮಾವರ ಠಾಣಾ ಸರಹದ್ದಿನ ಹಾವಂಜೆ ಗ್ರಾಮದ ಶೇಡಿಗುಳಿ ಎಂಬಲ್ಲಿ ಅನುಮಾನಸ್ಪದವಾಗಿ ತಿರುಗಾಡುತ್ತಿದ್ದ ಸ್ಯಾಂಟ್ರೋ ಕಾರನ್ನು ನಿಲ್ಲಿಸಿ ಪರಿಶೀಲಿಸಿದಾಗ ಕಾರಿನಲ್ಲಿ ಮನೆಯ ಬಾಗಿಲು ಒಡೆಯುವ ಕಬ್ಬಿಣದ ರಾಡ್, ಬೆಳ್ಳಿಯ ಆಭರಣಗಳು ಪತ್ತೆಯಾಗಿದ್ದು, ಮೂವರನ್ನು ಬಂಧಿಸಿ 5 ಮನೆ ಕಳ್ಳತನ ಪ್ರಕರಣಗಳನ್ನು ಭೇಧಿಸಿದ್ದಾರೆ.

ಆರೋಪಿಗಳ ಪತ್ತೆ ಕಾರ್ಯಾಚರಣೆಯಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷರಾದ ವಿಷ್ಣುವರ್ಧನ್ ಎನ್, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಎಸ್.ಟಿ. ಸಿದ್ದಲಿಂಗಪ್ಪ ರವರ ಮಾರ್ಗದರ್ಶನದಂತೆ ಉಡುಪಿ ಉಪ ವಿಭಾಗ ಪೊಲೀಸ್ ಉಪಾಧೀಕ್ಷಕ ಸುಧಾಕರ ಎಸ್ ನಾಯ್ಕ, ನಿರ್ದೇಶನದಂತೆ, ಬ್ರಹ್ಮಾವರ ಠಾಣಾ ಸಿ.ಪಿ.ಐ ಅನಂತ ಪದ್ಮನಾಭ, ಬ್ರಹ್ಮಾವರ ಠಾಣಾ ಪಿ.ಎಸ್.ಐ ಗುರುನಾಥ ಬಿ ಹಾದಿಮನಿ, ತನಿಖಾ ಪಿ.ಎಸ್.ಐ ಮುಕ್ತಾಬಾಯಿ, ಕೋಟ ಠಾಣಾ ಪಿ.ಎಸ್.ಐ ಮಧು ಬಿ.ಇ, ಬ್ರಹ್ಮಾವರ ಠಾಣಾ ಪ್ರೋಬೆಷನರಿ ಪಿ.ಎಸ್.ಐ.ಸುಬ್ರಮಣ್ಯ ದೇವಾಡಿಗ, ಬ್ರಹ್ಮಾವರ ಠಾಣಾ ಸಿಬ್ಬಂದಿಯವರಾದ ವೆಂಕಟರಮಣ ದೇವಾಡಿಗ, ಪ್ರವೀಣ ಶೆಟ್ಟಿಗಾರ್, ಮೊಹಮ್ಮದ್ ಅಜ್ಮಲ್, ರಾಘವೇಂದ್ರ ಕಾರ್ಕಡ, ಸಬಿತಾ, ಸುರೇಶ ಬಾಬು, ದಿಲೀಪ್, ಅಣ್ಣಪ್ಪ ಹಾಗೂ ಕೋಟ ಠಾಣಾ ಸಿಬ್ಬಂದಿಯವರಾದ ಪ್ರಸನ್ನ, ರಾಘವೇಂದ್ರ, ದುಂಡಪ್ಪ, ಗೋಪಾಲ ನಾಯ್ಕ ಮತ್ತು ಜಿಲ್ಲಾ ತಾಂತ್ರಿಕ ವಿಭಾಗದ ಸಿಬ್ಬಂದಿ ದಿನೇಶ್ ಪಾಲ್ಗೊಂಡಿದ್ದರು.