Tuesday, January 21, 2025
ಸುದ್ದಿ

ಕಲ್ಲಡ್ಕ: ಶ್ರೀ ಶಾರದಾ ಭಜನ ಮಂದಿರದಲ್ಲಿ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜಾ ಕಾರ್ಯಕ್ರಮ – ಕಹಳೆ ನ್ಯೂಸ್

ಬಂಟ್ವಾಳ: ಶ್ರೀರಾಮ ವಿದ್ಯಾ ಕೇಂದ್ರ ಕಲ್ಲಡ್ಕ, ಶ್ರೀ ಶಾರದಾ ಭಜನಾ ಮಂದಿರ ವೀರಕಂಭ ಹಾಗೂ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ ವೀರಕಂಭ ಇದರ ವತಿಯಿಂದ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜಾ ಕಾರ್ಯಕ್ರಮ ಶ್ರೀ ಶಾರದಾ ಭಜನಾ ಮಂದಿರ ವೀರಕಂಭದಲ್ಲಿ ಜರುಗಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಧಾರ್ಮಿಕ ಉಪನ್ಯಾಸ ಕಾರ್ಯಕ್ರಮದಲ್ಲಿ ಕಲ್ಲಡ್ಕ ಶ್ರೀರಾಮ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕಿ ಜಯಲಕ್ಷ್ಮಿ ವರಮಹಾಲಕ್ಷ್ಮಿ ಪೂಜೆಯ ಮಹತ್ವ ಆಚರಣಾ ವಿಧಾನದ ಬಗ್ಗೆ ಮಾಹಿತಿ ನೀಡಿದರು. ಪ್ರೀತ ಮಾತಾಜಿ ಭಾರತ ಮಾತಾ ಪೂಜನ ಕಾರ್ಯಕ್ರಮದ ಬಗ್ಗೆ ಮಾತನಾಡಿದರು.ವೇದಿಕೆಯಲ್ಲಿ ವೀರಕಂಭ ಗ್ರಾಮ ಪಂಚಾಯಿತಿ ಅಧ್ಯಕ್ಷ ದಿನೇಶ್, ವರಮಹಾಲಕ್ಷ್ಮಿ ಪೂಜಾ ಸಮಿತಿ ಅಧ್ಯಕ್ಷ ಪ್ರೇಮ ಜಯಕರ ಆಚಾರ್ಯ ಉಪಸ್ಥಿತರಿದ್ದರು.

ಸಮಿತಿ ಸದಸ್ಯ ಕುಸುಮ ಶೆಟ್ಟಿ ಪ್ರಾರ್ಥಿಸಿ, ಸುಚಿತ್ರ ಸ್ವಾಗತಿಸಿ, ಕುಸುಮ ವಂದಿಸಿದರು .ಸೌಮ್ಯ ವೇಣುಗೋಪಾಲ್ ಕಾರ್ಯಕ್ರಮ ನಿರ್ವಹಿಸಿದರು.