Tuesday, January 21, 2025
ಸುದ್ದಿ

ಸಿಎಂ ಬಸವರಾಜ ಬೊಮ್ಮಾಯಿಗೆ ಕೋರೋನ ಪಾಸಿಟಿವ್; ದೆಹಲಿ ಪ್ರವಾಸ ರದ್ದು – ಕಹಳೆ ‌ನ್ಯೂಸ್

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದ್ದು, ಈ ಹಿನ್ನಲೆ ದೆಹಲಿ ಪ್ರವಾಸವನ್ನು ರದ್ದುಗೊಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಬಗ್ಗೆ ಟ್ವಿಟ್ಟರ್ ಮಾಡಿರುವ ಸಿಎಂ ನನಗೆ ಕೋವಿಡ್ ಪಾಸಿಟಿವ್ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಕೊರೋನಾ ದೃಢಪಟ್ಟ ತಕ್ಷಣ ಪ್ರತ್ಯೇಕವಾಗಿದ್ದು ನನ್ನ ಸಂಪರ್ಕಕ್ಕೆ ಬಂದಿರುವವರೆಲ್ಲರೂ ಪರೀಕ್ಷೆ ಮಾಡಿಸಿಕೊಂಡು ಎಚ್ಚರಿಕೆ ವಹಿಸಿ ಎಂದು ತಿಳಿಸಿದ್ದಾರೆ.

ಮುಖ್ಯಮಂತ್ರಿಗಳು ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಅಧ್ಯಕ್ಷತೆಯಲ್ಲಿ ನಡೆಯುವ ಅಧಿಕೃತ ಸಭೆಯಲ್ಲಿ ಪಾಲ್ಗೊಳ್ಳಲು ದೆಹಲಿಗೆ ತೆರಳಬೇಕಿತ್ತು. ಆದರೆ ಕೊರೋನಾ ಕಂಡುಬಂದ ಹಿನ್ನೆಲೆಯಲ್ಲಿ ಸಿಎಂ ದೆಹಲಿ ಪ್ರವಾಸ ರದ್ದಾಗಿದೆ.