Monday, January 20, 2025
ಸುದ್ದಿ

ಪುತ್ತೂರು ಗ್ರಾಮಾಂತರ ಠಾಣೆಗೆ ವರ್ಗಾವಣೆ ಪಡೆದ ದಕ್ಷ ಪೊಲೀಸ್ ಅಧಿಕಾರಿ ರವಿ ಬಿ.ಎಸ್- ಕಹಳೆ ನ್ಯೂಸ್

ಪುತ್ತೂರು : ದ. ಕ ಜಿಲ್ಲೆಯಲ್ಲಿ ಕೊಲೆ, ದರೋಡೆ ಸೇರಿದಂತೆ ಹಲವಾರು ಪ್ರಕರಣಗಳನ್ನು ಪತ್ತೆ ಹಚ್ಚುವ, ವಿಶೇಷ ತಂಡದಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಖಡಕ್ ಅಧಿಕಾರಿ ರವಿ ಬಿ.ಎಸ್ ಶೃಂಗೇರಿ ಪೊಲೀಸ್ ಠಾಣೆಯಿಂದ ಪುತ್ತೂರು ಗ್ರಾಮಾಂತರ ಠಾಣೆಗೆ ವರ್ಗಾವಣೆಗೊಂಡಿದ್ದಾರೆ. ಶೃಂಗೇರಿ ಪೊಲೀಸ್ ಠಾಣೆಯ ಠಾಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ರವಿ ಬಿ.ಎಸ್ ಸೇರಿದಂತೆ ಚಿಕ್ಕಮಗಳೂರು ಹಾಸನ ಕೊಡಗು ಜಿಲ್ಲೆಗಳ ವಿವಿಧ ಇನ್ಸ್ಪೆಕ್ಟರ್‌ಗಳನ್ನು ವರ್ಗಾವಣೆಗೊಳಿಸಿ ಸರ್ಕಾರ ಆದೇಶಿಸಿದೆ. ಹೀಗಾಗಿ ಈ ಹಿಂದೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಕ್ಷ ಪೊಲೀಸ್ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದ ರವಿ ಬಿ.ಎಸ್ ಮತ್ತೆ ಪುತ್ತೂರು ಗ್ರಾಮಾಂತರ ಠಾಣೆಗೆ ವರ್ಗಾವಣೆಗೊಂಡಿದ್ದಾರೆ.
ರವಿ ಬಿ ಎಸ್‌ರವರು ಈ ಮೊದಲು ಉಪ್ಪಿನಂಗಡಿ, ಸುಳ್ಯ, ಪುತ್ತೂರು ಗ್ರಾಮಾಂತರ, ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪಿಎಸ್‌ಐ ಆಗಿ ಸೇವೆ ಸಲ್ಲಿಸಿದ್ದರು. 2015ರಲ್ಲಿ ಕೊಲೆಯತ್ನ ಪ್ರಕರಣದಲ್ಲಿ ಖ್ಯಾತ ಬಹುಭಾಷ ನಟ ವಿನೋದ್ ಆಳ್ವ ಅವರನ್ನು ಬಂಧಿಸಿದ ಖಡಕ್ ಪೊಲೀಸ್ ಅಧಿಕಾರಿ ಇವರು. ರಾಮಕುಂಜ ಕಾಲೇಜಿನ ಹಿಜಾಬ್ ಗಲಾಟೆ ಸಂದರ್ಭ ಇವರು ಉಪ್ಪಿನಂಗಡಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಅನೇಕ ಪ್ರಕರಣಗಳನ್ನು ಪತ್ತೆ ಹಚ್ಚಿ ದಕ್ಷ ಪೊಲೀಸ್ ಅಧಿಕಾರಿ ಎಂದೆನಿಕೊAಡ ರವಿ ಬಿ ಎಸ್‌ರವರು ಮತ್ತೆ ಪುತ್ತೂರು ತಾಲೂಕಿನಲ್ಲಿ ಪೊಲೀಸ್ ಅಧಿಕಾರಿಯಾಗಿ ವರ್ಗಾವಣೆ ಪಡೆದಿರುವುದು ಅನೇಕರಲ್ಲಿ ಸಂಸತಸ ತಂದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು