Recent Posts

Monday, January 20, 2025
ಸುದ್ದಿ

ಉಪ್ಪಿನಂಗಡಿ: ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ಪ್ರವೀಣ್ ನೆಟ್ಟಾರುರವರ ಉತ್ತರಕ್ರಿಯೆ : ಹಲವು ಪ್ರಮುಖರಿಂದ ನುಡಿನಮನ- ಕಹಳೆ ನ್ಯೂಸ್

ಪುತ್ತೂರು: ಕೆಲ ದಿನಗಳ ಹಿಂದೆ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಪ್ರವೀಣ್ ನೆಟ್ಟಾರು ರವರ ಉತ್ತರಕ್ರಿಯೆ ಆ.6 ರಂದು ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಸಹಸ್ರಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿರಿಸಲಾಗಿದ್ದ ಪ್ರವೀಣ್ ರವರ ಭಾವಚಿತ್ರಕ್ಕೆ ಕುಟುಂಬಸ್ಥರು ಹಾಗೂ ಹಲವು ಪ್ರಮುಖರು ಪುಷ್ಪ ನಮನ ಸಲ್ಲಿಸಿ, ನುಡಿ ನಮನಗೈದರು.

ಜು.26 ರಂದು ರಾತ್ರಿ ಬೆಳ್ಳಾರೆ ಚಿಕನ್ ಸೆಂಟರ್ ಬಳಿ ಪ್ರವೀಣ್ ರವರನ್ನು ದುಷ್ಕರ್ಮಿಗಳು ಹತ್ಯೆಗೈದಿದ್ದು, ಜು.27 ರಂದು ಅಂತ್ಯಕ್ರಿಯೆ ನಡೆಸಲಾಗಿತ್ತು.

ಇದೇ ವೇಳೆ ತುಳು ಅಕಾಡೆಮಿಯ ದಯಾನಂದ ಕತ್ತಲ್ ಸಾರ್, ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ಜಯಂತ ನಡುಬೈಲ್, ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಸೇರಿದಂತೆ ಕುಟುಂಬಸ್ಥರು ಮತ್ತು ಅನೇಕರು ಉಪಸ್ಥಿತರಿದ್ದರು