Recent Posts

Monday, January 20, 2025
ದಕ್ಷಿಣ ಕನ್ನಡಸುದ್ದಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆ. 14ರ ವರೆಗೆ ಸೆಕ್ಷನ್‌ 144 ಮುಂದುವರಿಕೆ – ರಾತ್ರಿ ನಿರ್ಬಂಧ ತೆರವು ; ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಆದೇಶ – ಕಹಳೆ ನ್ಯೂಸ್

ಮಂಗಳೂರು, ಆ 07 : ದ.ಕ ಜಿಲ್ಲೆಯಲ್ಲಿ ಅಪರಾಧ ಕೃತ್ಯ ನಡೆದ ಹಿನ್ನೆಲೆಯಲ್ಲಿ ಕೆಲವೊಂದು ನಿರ್ಬಂಧ ಹೇರಲಾಗಿತ್ತು. ಸದ್ಯ ನಿರ್ಬಂಧಗಳನ್ನು ತೆರೆಯಲು ದ.ಕ‌. ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ರಾತ್ರಿ 9 ಗಂಟೆಗೆ ಅಂಗಡಿ‌ ಮುಂಗಟ್ಟುಗಳನ್ನು ಬಂದ್ ಮಾಡಲಾಗಿತ್ತು. ಆದರೆ ನಾಳೆಯಿಂದ ರಾತ್ರಿ 9 ಗಂಟೆಯ ನಂತರವು ಅಂಗಡಿಗಳನ್ನು ಓಪನ್ ಇಡಬಹುದು. ಬಾರ್, ವೈನ್ ಶಾಪ್ ಎಂದಿನಂತೆ ಕಾರ್ಯಾಚರಿಸಲು ಅವಕಾಶ ನೀಡಲಾಗಿದೆ. ಜನರ ಓಡಾಟಕ್ಕೂ ಕೂಡ ಯಾವುದೇ ನಿರ್ಬಂಧವಿರುವುದಿಲ್ಲ. ಆಗಸ್ಟ್ 14 ರ ತನಕ 144 ಸೆಕ್ಷನ್ ಜಾರಿಯಲ್ಲಿರುತ್ತೆ ಎಂದು ದ.ಕ‌ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಆದೇಶ ಹೊರಡಿಸಿದ್ದಾರೆ.