Monday, January 20, 2025
ಕ್ರೈಮ್ದಕ್ಷಿಣ ಕನ್ನಡಸುದ್ದಿ

ಮಂಗಳೂರಿನಲ್ಲಿ ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತನಿಗೆ ಜೀವ ಬೆದರಿಕೆ, ಮೂರು ಬಾರಿ ಬೈಕ್​ನಲ್ಲಿ ಕಾರ್ಯಕರ್ತನನ್ನು ಹಿಂಬಾಲಿಸಿದ್ದ ದುಷ್ಕರ್ಮಿ ಜಿಹಾದಿಗಳಿಂದ ಹತ್ಯೆಗೆ ಯತ್ನ ; ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್…! – ಕಹಳೆ ನ್ಯೂಸ್

ಮಂಗಳೂರು: ನಗರದ ವಿಶ್ವ ಹಿಂದೂ ಪರಿಷತ್ (Vishwa Hindu Parishad – VHP) ಕಾರ್ಯಕರ್ತನಿಗೆ ಜೀವ ಬೆದರಿಕೆ ಹಾಕಿರುವ ದುಷ್ಕರ್ಮಿಗಳು ಹತ್ಯೆಗೂ ಯತ್ನಿಸಿರುವ ಆಘಾತಕಾರಿ ಮಾಹಿತಿ ಬಹಿರಂಗಗೊಂಡಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಮೂರು ಬಾರಿ ಬೈಕ್​ನಲ್ಲಿ ಕಾರ್ಯಕರ್ತನನ್ನು ಹಿಂಬಾಲಿಸಿದ್ದ ದುಷ್ಕರ್ಮಿಗಳು ಹತ್ಯೆಗೆ ಯತ್ನಿಸಿದ್ದರು. ಮಾತ್ರವಲ್ಲದೆ, ದೂರವಾಣಿ ಮೂಲಕವೂ ಹಲವು ಬಾರಿ ಜೀವ ಬೆದರಿಕೆ ಹಾಕಿದ್ದರು. ಈ ಸಂಬಂಧ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್​​ 506, 507ರ ಅನ್ವಯ ಎಫ್​ಐಆರ್ ದಾಖಲಾಗಿದೆ.

ಮಂಗಳೂರಿನ ಬಜ್ಜೋಡಿ-ಬಿಕರ್ನಕಟ್ಟೆ ರಸ್ತೆಯಲ್ಲಿ ಕಾರು ಹಿಂಬಾಲಿಸಿದ್ದ ದುಷ್ಕರ್ಮಿಗಳು ಆಗಸ್ಟ್ 7ರಂದು ಕಾರಿಗೆ ಬೈಕ್ ತಾಗಿಸಿದ್ದರು. ಅದೇ ದಿನ ರಾತ್ರಿ 11.43ಕ್ಕೆ ಕಾರ್ಯಕರ್ತನಿಗೆ ಕರೆ ಮಾಡಿದ್ದ ಅವರು, ತುಳು ಮಿಶ್ರಿತ ಉರ್ದು ಭಾಷೆಯಲ್ಲಿ ಜೀವ ಬೆದರಿಕೆ ಹಾಕಿದ್ದರು. ಈ ಸಂಬಂಧ ಕಂಕನಾಡಿ ನಗರ ಠಾಣೆಯಲ್ಲಿ FIR ದಾಖಲು

‘ಇನಿ ತಪ್ಪಯ ಪಂಡ್​ದ್ ಖುಷಿ ಮಲ್ಪೋಡ್ಚಿ, ಗೊತ್ತುಂಡು, ನನ್ನ ಮೂಜಿ ಜನ ಪಂಪುವೆಲ್ ಡ್ ಉಲ್ಲೆರತ್ತಾ, ಬುಡ್ಪುಜಿ ಯಾನ್, ಕರ್ತಿನ ಬೇನೆ ಉಂಡು’ (ಈ ದಿನ ತಪ್ಪಿಸಿದ್ದಿ ಎಂದು ಖುಷಿ ಪಡಬೇಡ, ಗೊತ್ತಿದೆ. ಇನ್ನೂ ಮೂರು ಜನ ಪಂಪ್​ವೆಲ್​ನಲ್ಲಿ ಇದ್ದಾರೆ. ನಾನು ಬಿಡುವುದಿಲ್ಲ. ಕೊಂದ ನೋವು ಇದೆ) ಎಂದು ಬೆದರಿಕೆ ಹಾಕಿದ್ದರು ಎಂದು ದೂರಿನಲ್ಲಿ ತಿಳಿಸಲಾಗಿದೆ.

ಕೋಮುಗಲಭೆಯಲ್ಲಿ ಪಾಲ್ಗೊಂಡವರ ಆಸ್ತಿ ಮುಟ್ಟುಗೋಲಿಗೆ ಕ್ರಮ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ಗಲಭೆಯಲ್ಲಿ ತೊಡಗಿಸಿಕೊಳ್ಳುವವರ ಬಗ್ಗೆ ಪೊಲೀಸರು ನಿರ್ದಾಕ್ಷಿಣ್ಯವಾಗಿ ವರ್ತಿಸಲಿದ್ದಾರೆ. ಅಂಥವರ ಮೇಲೆ ಗೂಂಡಾ ಕಾಯ್ದೆ ಜಾರಿ ಮಾಡುವುದು, ಆಸ್ತಿ ಮುಟ್ಟುಗೋಲು ಹಾಕಿಕೊಳ್ಳುವುದು ಸೇರಿದಂತೆ ಹಲವು ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ. ಕೋಮು ಸೌಹಾರ್ದ ಕದಡುವವರ ಬಗ್ಗೆ ನಾವು ಹಾರ್ಷ್​ (ಕಠೋರ) ಆಗಿಯೇ ವರ್ತಿಸುತ್ತೇವೆ. ನಮ್ಮಿಂದ ಸಾಫ್ಟ್ ಆದ ವರ್ತನೆ ನಿರೀಕ್ಷಿಸಬೇಡಿ. ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಮುಖ್ಯ ಆರೋಪಿಯ ಜಾಡು ಸಿಕ್ಕಿದೆ. ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳಕ್ಕೆ (National Investigation Agency – NIA) ಒಪ್ಪಿಸಿದ್ದರೂ ನಮ್ಮ ಪ್ರಯತ್ನಗಳನ್ನು ನಾವು ನಿಲ್ಲಿಸುವುದಿಲ್ಲ ಎಂದು ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಎಡಿಜಿಪಿ ಅಲೋಕ್​ ಕುಮಾರ್ ಎಚ್ಚರಿಸಿದರು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ಸರಣಿ ಕೊಲೆ ಪ್ರಕರಣಗಳ ತನಿಖೆಯ ಸ್ಥಿತಿಗತಿ ಕುರಿತು ಕಮಿಷನರೇಟ್ ಕಚೇರಿಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳಿಂದ ಮಾಹಿತಿ ಪಡೆದ ಅವರು, ಸಭೆಯ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ವಿವಿಧ ಹತ್ಯೆ ಪ್ರಕರಣಗಳ ತನಿಖೆಯ ಪ್ರಗತಿ ಪರಿಶೀಲಿಸಿ ಅಗತ್ಯ ಸೂಚನೆ ನೀಡಿದ್ದೇನೆ. ಕೆಲವೊಮ್ಮೆ ಆರೋಪಿಗಳ ಬಂಧನದ ನಂತರ ತನಿಖೆ ಸಮರ್ಪಕವಾಗಿ ಆಗದಿದ್ದರೆ ನ್ಯಾಯಾಲಯದಲ್ಲಿ ಖುಲಾಸೆಯಾಗುವ ಅಪಾಯ ಇರುತ್ತದೆ. ಹೀಗಾಗಿ ಸಮರ್ಪಕ ತನಿಖೆಗೆ ಸೂಚನೆ ನೀಡಿದ್ದೇನೆ. ಈಗಾಗಲೇ ಆರೋಪಿಗಳನ್ನ ನ್ಯಾಯಾಲಯಗಳಲ್ಲಿ ನಡೆಯುತ್ತಿರುವ ವಿಚಾರಣೆಯ ಸ್ಥಿತಿಗತಿ ಬಗ್ಗೆಯೂ ಮಾಹಿತಿ ಪಡೆದಿದ್ದೇನೆ. ಕೋಮುಗಲಭೆಯಲ್ಲಿ ತೊಡಗಿಸಿಕೊಂಡವರ ಮೇಲೆ ಗೂಂಡಾ ಕಾಯ್ದೆ ಜಾರಿ ಮಾಡಿದ್ದೇವೆಯೇ ಇಲ್ಲವೇ ಎಂಬ ಬಗ್ಗೆ ಪರಿಶೀಲಿಸಿದೆ ಎಂದು ಹೇಳಿದರು.