Monday, January 20, 2025
ಸುದ್ದಿ

ವಿಟ್ಲ: ಆ.12ರಂದು ಕೆಲಿಂಜ ಶ್ರೀ ಉಳ್ಳಾಲ್ತಿ ದೇವಸ್ಥಾನದ ಶ್ರೀನಿಕೇತನ ಸಭಾಭವನದಲ್ಲಿ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜೆ ಹಾಗೂ ಜ್ಞಾನವಿಕಾಸ ಕೇಂದ್ರಗಳ ವಾರ್ಷಿಕೋತ್ಸವ ಕಾರ್ಯಕ್ರಮ – ಕಹಳೆ ನ್ಯೂಸ್

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ವಿಟ್ಲ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮ ಅಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್( ರಿ) ವಿಟ್ಲ ಇದರ ಕಾರ್ಯ ಕ್ಷೇತ್ರ ವ್ಯಾಪ್ತಿಯ ಕಲ್ಲಡ್ಕ ವಲಯದ ಪ್ರಗತಿ ಬಂದು ಸ್ವ-ಸಹಾಯ ಸಂಘಗಳ ಒಕ್ಕೂಟ ಕೆಲಿಂಜ ಹಾಗೂ ಮಾಮೇಶ್ವರ, ಹಿಂದೂ ಧಾರ್ಮಿಕ ಸೇವಾ ಸಮಿತಿ ಕೆಲಿಂಜ, ವರಮಹಾಲಕ್ಷ್ಮಿ ಪೂಜಾ ಸಮಿತಿ ಇದರ ಜಂಟಿ ಆಶ್ರಯದಲಿ,್ಲ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜೆ ಹಾಗೂ ಜ್ಞಾನವಿಕಾಸ ಕೇಂದ್ರಗಳ ವಾರ್ಷಿಕೋತ್ಸವ ಕಾರ್ಯಕ್ರಮ ಹಿಂದೂ ಧಾರ್ಮಿಕ ಸೇವಾ ಸಮಿತಿ ಕೆಲಿಂಜ ಇದರ ಅಧ್ಯಕ್ಷರಾದ ಶ್ರೀಯುತ ಪದ್ಮನಾಭ ಗೌಡ ಅಢೈಯಿ ಇವರ ಅಧ್ಯಕ್ಷತೆಯಲ್ಲಿ ಆ.12ರಂದು ಕೆಲಿಂಜ ಶ್ರೀ ಉಳ್ಳಾಲ್ತಿ ದೇವಸ್ಥಾನದ ಶ್ರೀನಿಕೇತನ ಸಭಾಭವನದಲ್ಲಿ ನಡೆಯಲಿದೆ.

ಹಿಂದುಳಿದ ಕಲ್ಯಾಣ ಇಲಾಖೆಯ ದಕ್ಷಿಣ ಕನ್ನಡ ಇದರ ಜಿಲ್ಲಾಧಿಕಾರಿಯಾಗಿರುವ ರಶ್ಮಿ ಎಸ್.ಆರ್ ಕಾರ್ಯಕ್ರಮದ ಉದ್ಘಾಟನೆಯನ್ನು ಮಾಡಲಿದ್ದು, ಧಾರ್ಮಿಕ ಉಪಾನ್ಯಾಸಕರಾಗಿ ಖ್ಯಾತ ಬರಹಗಾರ್ತಿ ಸಮಾಜ ಸೇವಕಿ ವಿಂದ್ಯಾ ಎಸ್ ರೈ ಭಾಗವಹಿಸಲಿದ್ದಾರೆ.
ಇನ್ನು ಗಣ್ಯ ಅತಿಥಿಗಳಾಗಿ ವೀರಕಂಬ ಗ್ರಾಮ ಪಂಚಾಯತ್ ಅಧ್ಯಕ್ಷ ದಿನೇಶ್, ಗ್ರಾಮ ಅಭಿವೃದ್ಧಿ ಯೋಜನೆ ಯೋಜನಾಧಿಕಾರಿ ಚೆನ್ನಪ್ಪ ಗೌಡ, ವಿಟ್ಲ ಶ್ರವಣ ಜುವೆಲ್ಲರ್ಸ್ ನ ಮಾಲಕ ಸದಾಶಿವ ಆಚಾರ್ಯ ಕೈಂತಿಲ ,ನಿವೃತ್ತ ಸೈನಿಕ ದಾಸಪ್ಪ ಪೂಜಾರಿ ನೆಕ್ಕಿಲಾರ್, ಲಯನ್ ಸಂತೋμï ಕುಮಾರ್ ಪೆಲತಡ್ಕ, ವಿಟ್ಲ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕಿ ಶ್ರೀಮತಿ ಜಲಜಾಕ್ಷಿ ಬಾಲಪ್ಪ ಗೌಡ, ಮಾಮೇಶ್ವರ ಶ್ರೀ ಉಮಾ ಮಹೇಶ್ವರ ದೇವಸ್ಥಾನದ ಅಧ್ಯಕ್ಷರಾದ ವೀರಪ್ಪಗೌಡ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ವಿಟ್ಲ ಇದರ ಮೇಲ್ವಿಚಾರಕಿ ರೋಹಿಣಿ ನಾಯ್ತೊಟ್ಟು, ಮೊದಲಾದವರು ಭಾಗವಹಿಸಲಿದ್ದು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಸಂಘಟಕರು ತಿಳಿಸಿದ್ದಾರೆ.