Recent Posts

Monday, January 20, 2025
ಸುದ್ದಿ

ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕುಳಾಯಿಯಲ್ಲಿ ಹರ್ ಘರ್ ತಿರಂಗಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಶಾಸಕ ಡಾ.ವೈ. ಭರತ್ ಶೆಟ್ಟಿ – ಕಹಳೆ ನ್ಯೂಸ್

ಮಂಗಳೂರು: ಸ್ವಾತಂತ್ರ್ಯದ ಅಮೃತ ಮಹೋತ್ಸವ ಹಿನ್ನಲೆಯಲ್ಲಿ ಪ್ರಧಾನಿ ಮೋದಿಜಿ ಅವರ ಕರೆಯಂತೆ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕುಳಾಯಿ ಪ್ರದೇಶದಲ್ಲಿ ಹರ್ ಘರ್ ತಿರಂಗಾ ಕಾರ್ಯಕ್ರಮಕ್ಕೆ ಶಾಸಕರಾದ ಡಾ. ವೈ. ಭರತ್ ಶೆಟ್ಟಿ ಚಾಲನೆ ನೀಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಸ್ವಾತಂತ್ರ್ಯ ಅಮೃತಮಹೋತ್ಸವದ ಪ್ರಯುಕ್ತ ಸುರತ್ಕಲ್ ಬೀಚಿನಲ್ಲಿ ರಾಷ್ಟ್ರೀಯತೆಯನ್ನು ಬಿಂಬಿಸುವ ಬೃಹತ್ ಕಾರ್ಯಕ್ರಮವನ್ನು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ವತಿಯಿಂದ ಹಮ್ಮಿಕೊಳ್ಳಲಾಗಿದೆ.
ದೇಶಭಕ್ತಿಯ ಸಂಕೇತವಾಗಿ ವಿವಿಧ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಶಾಸಕರು ಹೇಳಿದರು. ಕಾರ್ಯಕರ್ತರು ಆಗಮಿಸಿ ಕಾರ್ಯಕ್ರಮ ಯಶಸ್ವಿಗೊಳಿಸಲು ಕರೆ ನೀಡಿದರು.
ಮೇಯರ್ ಪ್ರೇಮಾನಂದ ಶೆಟ್ಟಿ, ಉಪಮೇಯರ್ ಸುಮಂಗಳ ರಾವ್, ಪಾಲಿಕೆ ಸದಸ್ಯರು, ಪಕ್ಷದ ಮುಖಂಡರು, ಕಾರ್ಯಕರ್ತರು, ಗಣ್ಯರು ಉಪಸ್ಥಿತರಿದ್ದರು.