Sunday, November 24, 2024
ಕ್ರೈಮ್ದಕ್ಷಿಣ ಕನ್ನಡಸುದ್ದಿ

ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ : ಪ್ರಮುಖ ಮೂರು ಆರೋಪಿಗಳು ಅಂದರ್..!? – ಕೊನೆಗೂ ಜಿಹಾದಿಗಳ ಹೆಡೆಮುಕಟ್ಟಿದ ಪೊಲೀಸರು – ಕಹಳೆ ನ್ಯೂಸ್

ಮಂಗಳೂರು, ಆ 11 : ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಈಗಾಗಲೇ ಏಳು ಮಂದಿಯ ಬಂಧನವಾಗಿದೆ. ಪ್ರಕರಣ ಸಂಬಂಧಿಸಿ ಇನ್ನೂ ಮೂವರು ಆರೋಪಿಗಳ ಬಂಧಿಸಲು ಪೊಲೀಸರು ಬಲೆ ಬೀಸಿದ್ದಾರೆ ಎಂದು ಎಡಿಜಿಪಿ ಅಲೋಕ್‌ಕುಮಾರ್ ತಿಳಿದಿದ್ದರು. ಇಂದು ಆ ಮೂರು ಆರೋಪಗಳನ್ನು ಹೆಡೆಮುಕಟ್ಟುವಲ್ಲಿ ಪೋಲೀಸರು ಯಶಸ್ವಿಯಾಗಿದ್ದಾರೆ ಎಂಬ ಮಾಹಿತಿ ಪೋಲೀಸ್ ಮೂಲಗಳಿಂದ ಅಭಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಬುಧವಾರ ಮಾತನಾಡಿದ ಎಡಿಜಿಪಿ, ಮೂವರು ಆರೋಪಿಗಳ ಮನೆ, ವಿಳಾಸ, ಫೋಟೋ ಸೇರಿದಂತೆ ಮಾಹಿತಿಗಳು ನಮ್ಮ ಬಳಿ ಇದೆ. ಅವರನ್ನು ಶೀಘ್ರ ಪತ್ತೆ ಹಚ್ಚಲಾಗುವುದು. ಸುಮಾರು 7-8 ಜಿಲ್ಲಾ ಪೊಲೀಸ್ ಅಧಿಕಾರಿಗಳೊಂದಿಗೆ ಬೆಳ್ಳಾರೆಯಲ್ಲಿ ಈ ಸಂಬಂಧ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಆರೋಪಿಗಳನ್ನು ದಸ್ತಗಿರಿ ಮಾಡುವ ವಿಚಾರವಾಗಿ ಚರ್ಚಿಸಲಾಗಿದೆ. ಪ್ರಕರಣದಲ್ಲಿ ಭಾಗಿಯಾದವರ ಮೇಲೆ ಪೊಲೀಸರು ಮತ್ತು ಎನ್‌ಐಎ ಮೂಲಕ ಕ್ರಮ ಕೈಗೊಳ್ಳಲಾಗುವುದು ಎಂದಿದ್ದರು.

ಆರೋಪಿಗಳಿಗೆ ಆಶ್ರಯ ನೀಡಿದವರ ವಿರುದ್ದವೂ ಕ್ರಮ ಕೈಗೊಳ್ಳಲಾಗುವುದು. ಅಲ್ಲದೆ, ಪ್ರವೀಣ್ ಮತ್ತು ಫಾಝಿಲ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ಸಹಕರಿಸಿದ ಎಲ್ಲರ ಮೇಲೆಯೂ ಕ್ರಮ ಕೈಗೊಳ್ಳಲಾಗುವುದು ಎಂದು ಅಲೋಕ್‌ಕುಮಾರ್ ತಿಳಿಸಿದ್ದರು.

ಆರೋಪಿಗಳಿಗೆ ಪಿಎಫ್‌ಐ ಮತ್ತು ಎಸ್‌ಡಿಪಿಐ ನಂಟಿನ ಕುರಿತು ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಇದು ಪೂರ್ವ ನಿಯೋಜಿತ ಹತ್ಯೆಯಾಗಿದೆ. ಯಾವುದೇ ದಾಖಲೆಗಳಿಲ್ಲದೆ ನಾನು ಮಾತನಾಡುವುದು ಸರಿಯಲ್ಲ. ಆದರೆ ಪಿಎಫ್‌ಐ ಜೊತೆಗೆ ಆರೋಪಿಗಳಿಗೆ ಸಂಪರ್ಕವಿರುವುದು ಗೊತ್ತಾಗಿದೆ. ಈ ಬಗ್ಗೆ ಇನ್ನಷ್ಟು ದಾಖಲೆಗಳನ್ನು ಕಲೆ ಹಾಕಲಾಗುವುದು ಎಂದು ವಿವರಿಸಿದ್ದರು.

ಇಂದು‌ ಮಧ್ಯಾಹ್ನ 12.30 ಗಂಟೆಗೆ ಜಿಲ್ಲಾಪೋಲೀಸ್ ವರಿಷ್ಠಾಧಿಕಾರಿಗಳ ಕಛೇರಿಯಲ್ಲಿ ಸುದ್ದಿಗೋಷ್ಠಿ‌ ಕರೆಯಲಾಗಿದ್ದು, ಅಧಿಕೃತವಾಗಿ ಆರೋಪಿಗಳ ಹೆಸರು ಮತ್ತು ವಿವರಗಳನ್ನು ಪೋಲೀಸರು ನೀಡಲಿದ್ದಾರೆ ಎಂಬ ಮಾಹಿತಿ ಪೋಲೀಸ್ ಮೂಲಗಳಿಂದ ಲಭಿಸಿದೆ.