ಬೆಂಗಳೂರು: ಖ್ಯಾತ ಗಾಯಕ ಶಿವಮೊಗ್ಗ ಸುಬ್ಬಣ್ಣ ಅವರು ಇಂದು ಬೆಂಗಳೂರಿನಲ್ಲಿ ಕೊನೆಯುಸಿರೆಳೆದರು. ಅವರಿಗೆ 83 ವರ್ಷ ವಯಸ್ಸಾಗಿತ್ತು. ಬೆಂಗಳೂರಿನ ಜಯದೇವ ಆಸ್ಪತ್ರೆಯಲ್ಲಿ ಇಂದು ಅವರು ನಿಧನರಾದರು.
ಸುಗಮ ಸಂಗೀತ ಕ್ಷೇತ್ರದ ದಿಗ್ಗಜರಲ್ಲಿ ಒಬ್ಬರಾಗಿರುವ ಅವರು ಮೂಲ ಹೆಸರು ಜಿ.
ಸುಬ್ರಹ್ಮಣ್ಯಂ. ನಂತರ ಅವರು ಶಿವಮೊಗ್ಗ ಸುಬ್ಬಣ್ಣ ಎಂದೇ ಹೆಸರುವಾಸಿಯಾದರು. ಶಿವಮೊಗ್ಗ ಜಿಲ್ಲೆಯ ನಗರದವರಾದ ಇವರು ಗಣೇಶ್ ರಾವ್-ರಂಗನಾಯಕಮ್ಮ ದಂಪತಿಯ ಪುತ್ರ.
ಆರಂಭದಲ್ಲಿ ಆಕಾಶವಾಣಿಯ ಗಾಯಕರಾಗಿದ್ದ ಅವರು ಬಳಿಕ ಚಂದ್ರಶೇಖರ ಕಂಬಾರ ನಿರ್ದೇಶನದ ‘ಕರಿಮಾಯಿ’ ಚಿತ್ರದ ಮೂಲಕ ಹಿನ್ನೆಲೆ ಗಾಯಕರಾಗಿ ಸಿನಿಮಾ ರಂಗಕ್ಕೂ ಪ್ರವೇಶಿಸಿದ್ದರು. ‘ಕೋಡಗನ ಕೋಳಿ ನುಂಗಿತ್ತಾ..’, ‘ಅಳಬೇಡಾ ತಂಗಿ ಅಳಬೇಡ…’ ‘ಬಿದ್ದೀಯಬ್ಬೇ ಮುದುಕಿ..’ ಹಾಡುಗಳು ಇವರ ಗಾಯನದ ಗೀತೆಗಳಲ್ಲಿ ಅತ್ಯಂತ ಜನಪ್ರಿಯವಾದಂಥವು.