Tuesday, January 21, 2025
ಸುದ್ದಿ

ಕುಂದಾ ನಗರಿ ಬೆಳಗಾವಿಯಲ್ಲಿ ಚಿರತೆಗಳ ಹಾವಳಿ : 52 ಶಾಲೆಗಳಿಗೆ ರಜೆ ಘೋಷಣೆ ಮಾಡಿದ ಜಿಲ್ಲಾಧಿಕಾರಿ – ಕಹಳೆ ನ್ಯೂಸ್

ಬೆಳಗಾವಿ: ಕುಂದಾ ನಗರಿ ಬೆಳಗಾವಿಯಲ್ಲಿ ಚಿರತೆಗಳ ಹಾವಳಿ ಹೆಚ್ಚಾಗಿದೆ. ಜಿಲ್ಲೆಯಲ್ಲಿ ಎರಡು ಚಿರತೆಗಳು ಪ್ರತ್ಯಕ್ಷವಾಗಿರುವ ಹಿನ್ನೆಲೆಯಲ್ಲಿ ಮುನ್ನೆಚ್ಛರಿಕಾ ಕ್ರಮವಾಗಿ ಜಿಲ್ಲೆಯ 52 ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಆಗಸ್ಟ್ 5 ರಂದು ಬೆಳಗಾವಿಯ ಜಾಧವ್​ ನಗರದಲ್ಲಿ ಚಿರತೆ ಪತ್ತೆಯಾಗಿತ್ತು.

ಇದಾದ ಬಳಿಕ ಬೆಳಗಾವಿಯ ಗಾಲ್ಫ್ ಮೈದಾನದಲ್ಲೂ ಚಿರತೆ ಪತ್ತೆಯಾಗಿದೆ. ಈ ಹಿನ್ನಲೆಯಲ್ಲಿ ಬೆಳಗಾವಿ ನಗರದ 22 ಸರ್ಕಾರಿ ಮತ್ತು ಖಾಸಗಿ ಶಾಲೆಗಳಿಗೆ ಈಗಾಗಲೇ ಘೋಷಣೆ ಮಾಡಲಾಗಿದ್ದ ರಜೆಯನ್ನು ಇಂದೂ ಕೂಡ ಮುಂದುವರಿಸಲಾಗಿದೆ.

ಮೂಡಲಗಿ ತಾಲೂಕಿನ ಧರ್ಮಟ್ಟಿ ಗ್ರಾಮದಲ್ಲಿ ಕಳೆದ ರಾತ್ರಿ ಚಿರತೆ ಪ್ರತ್ಯಕ್ಷ ಹಿನ್ನೆಲೆಯಲ್ಲಿ ಮೂಡಲಗಿ ಪಟ್ಟಣ, ಮಸಗುಪ್ಪಿ, ಶಿವಾಪೂರ ಗ್ರಾಮದ 30 ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಧರ್ಮಟ್ಟಿ ಗ್ರಾಮದ ಅನಿಲ್ ಎಂಬುವರ ತೋಟದ ಮನೆಗೆ ನುಗ್ಗಿದ ಚಿರತೆ, ಮೇಕೆ ಹೊತ್ತೊಯ್ದಿದೆ.

ಬೆಳಗಾವಿ ಜಾಧವ್ ನಗರದಲ್ಲಿ ಏಳು ದಿನಗಳ ಹಿಂದೆ ಪತ್ತೆಯಾಗಿದ್ದ ಚಿರತೆ ಮತ್ತು ನಿನ್ನೆ ರಾತ್ರಿ ಮೂಡಲಗಿ ಗ್ರಾಮದಲ್ಲಿ ಪತ್ತೆಯಾಗಿರುವ ಚಿರತೆ ಸೆರೆಹಿಡಿಯಲು ಎರಡು ಕಡೆಗಳಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಯಿಂದ ಶೋಧ ಕಾರ್ಯ ಮುಂದುವರೆದಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಅವರು 52 ಶಾಲೆಗಳಿಗೆ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದ್ದಾರೆ