Tuesday, January 21, 2025
ಕ್ರೈಮ್ದಕ್ಷಿಣ ಕನ್ನಡಪುತ್ತೂರುಸುದ್ದಿಸುಳ್ಯ

ಬಿಜೆಪಿ ಯುವಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ; ಬಂಧಿತ ಮೂವರು ಜಿಹಾದಿ ಹಂತಕರಿಗೆ 5 ದಿನ ಪೊಲೀಸ್ ಕಸ್ಟಡಿ – ಕಹಳೆ ನ್ಯೂಸ್

ಸುಳ್ಯ, ಆ 11 : ಬೆಳ್ಳಾರೆಯಲ್ಲಿ ನಡೆದ ಬಿಜೆಪಿ ಯುವಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಪ್ರಮುಖ ಆರೋಪಿಗಳನ್ನು ಗುರುವಾರದಂದು ಬಂಧಿಸಲಾಗಿದ್ದು, ಅವರನ್ನು ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಮೂರು ಮಂದಿ ಆರೋಪಿಗಳನ್ನು ಸುಳ್ಯ ನ್ಯಾಯಾಲಯಕ್ಕೆ ಇಂದು ಹಾಜರುಪಡಿಸಲಾಗಿತ್ತು. ಕೋರ್ಟ್ ನಲ್ಲಿ ಪೊಲೀಸರ ಮನವಿ ಹಿನ್ನೆಲೆಯಲ್ಲಿ ಆ.16ರವರೆಗೆ ಆರೋಪಿಗಳಿಗೆ ಪೊಲೀಸ್ ಕಸ್ಟಡಿ ವಿಧಿಸಿ ನ್ಯಾಯಾಲಯ ಆದೇಶ ನೀಡಿದೆ.ಇಂದು ಬಂಧಿಸಲಾದ ಪ್ರಮುಖ ಆರೋಪಿಗಳಾದ ಸುಳ್ಯ ನಿವಾಸಿ ಶಿಯಾಬುದ್ದೀನ್ (33), ರಿಯಾಝ್ ಅಂಕತಡ್ಕ‌ (27), ಎಲಿಮಲೆ ನಿವಾಸಿ ಬಶೀರ್ (29) ಎಂಬವರನ್ನು ಗುರುವಾರ ಸಂಜೆ ಸುಳ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಹೆಚ್ಚಿನ ತನಿಖೆಗಾಗಿ ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ನೀಡುವಂತೆ ಪೊಲೀಸ್ ಅಧಿಕಾರಿಗಳು ಮನವಿ ಸಲ್ಲಿಸಿದ್ದರು. ಮನವಿ ಪುರಸ್ಕರಿಸಿದ ನ್ಯಾಯಾಲಯವು ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ನೀಡಿ ಆದೇಶ ನೀಡಿದೆ ಎಂದು ತಿಳಿದು ಬಂದಿದೆ.