Tuesday, January 21, 2025
ಸುದ್ದಿ

ನರೇಂದ್ರ ಪದವಿ ಪೂರ್ವ ಕಾಲೇಜಿನಲ್ಲಿ ರಕ್ಷಾಬಂಧನ ಕಾರ್ಯಕ್ರಮ- ಕಹಳೆ ನ್ಯೂಸ್

ಪುತ್ತೂರು: “ರಕ್ಷಾಬಂಧನ ಸಹೋದರ -ಸಹೋದರಿಯರ ಸಂಬಂಧಕ್ಕೆ ಮಾತ್ರ ಸೀಮಿತವಾಗದೆ ವಿಶ್ವಬಂಧುತ್ವಕ್ಕೆ ಸಾಕ್ಷಿಯಾಗಿದೆ. ಭಾರತೀಯ ಸಂಪ್ರದಾಯಗಳು ಸಂಬಂಧಗಳನ್ನು ಗಟ್ಟಿಗೊಳಿಸುತ್ತದೆ. ಪ್ರತೀ ಹಬ್ಬದಲ್ಲೂ ಬದುಕಿಗೆ ಬೇಕಾದ ಸಂದೇಶಗಳು ಇರುತ್ತದೆ. ಅವುಗಳನ್ನು ನಾವು ಅರಿತುಕೊಳ್ಳಬೇಕು. ಪರಸ್ಪರ ಭ್ರಾತೃತ್ವದ ಭಾವನೆಯನ್ನು ದಟ್ಟಗೊಳಿಸುವ ಹಬ್ಬ ಈ ರಕ್ಷಾಬಂಧನ.” ಎಂದು ವಿವೇಕಾನಂದ ಪ.ಪೂ.ಕಾಲೇಜಿನ ಪ್ರಾಂಶುಪಾಲರಾದ ಮಹೇಶ್ ನಿಟಿಲಾಪುರ ಹೇಳಿದರು.
ನರೇಂದ್ರ ಪ.ಪೂ.ಕಾಲೇಜಿನಲ್ಲಿ ನಡೆದ ರಕ್ಷಾಬಂಧನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. “ಇತ್ತೀಚೆಗೆ ಯುವಜನತೆಗೆ ಪಾಶ್ಚಾತ್ಯ ಆಚರಣೆಗಳ ಮೇಲೆ ಮೋಹ ಹೆಚ್ಚಾಗಿದೆ. ಅವರಿಗೆ ಸಂಬಂಧಗಳ ಮೌಲ್ಯ ಸಾರುವ ರಕ್ಷಾಬಂಧನದಂತಹ ಹಬ್ಬಗಳ ಮಹತ್ವ ತಿಳಿಸಿಕೊಡುವ ಕೆಲಸ ಆಗಬೇಕಿದೆ. ಅಣ್ಣತಂಗಿಯರ ಬಾಂಧವ್ಯದ ಪ್ರೀತಿ ಹಾಗೂ ನೆನಪುಗಳು ಅಚ್ಚಳಿಯಿದೆ ಉಳಿಯಲು ಪ್ರತೀ ವರ್ಷ ರಕ್ಷಾ ಬಂಧನವನ್ನು ಆಚರಿಸಲಾಗುತ್ತದೆ.”ಎಂದು ಹೇಳಿದರು.
ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಕಾರ್ಯಕ್ರಮವನ್ನು ಆಯೋಜಿಸಿದರು.ವಿದ್ಯಾರ್ಥಿಗಳು ಪರಸ್ಪರ ರಕ್ಷೆಯನ್ನು ಕಟ್ಟಿ ಆ ಮೂಲಕ ತಮ್ಮೊಳಗಿನ ಐಕ್ಯತೆಯನ್ನು ಪ್ರದರ್ಶಿಸಿದರು. ವೇದಿಕೆಯಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಪ್ರಸಾದ್ ಶ್ಯಾನಭಾಗ್ ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು