Recent Posts

Sunday, January 19, 2025
ಸುದ್ದಿ

ನಿರ್ಭಯ ಅತ್ಯಾಚಾರ ಪ್ರಕರಣ ; ಗಲ್ಲು ಖಾಯಂಗೊಳಿಸಿ ಪುನರ್ ಪರಿಶೀಲನಾ ಅರ್ಜಿಯ ವಜಾಗೊಳಿಸಿದ ಸುಪ್ರೀಂ – ಕಹಳೆ ನ್ಯೂಸ್

ಜು 09: ದೇಶವನ್ನೇ ತಲ್ಲಣಗೊಳಿಸಿದೆ ನಿರ್ಭಯಾ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿರುವ ಮೂವರು ಅಪರಾಧಿಗಳು ಸಲ್ಲಿಸಿರುವ ಪುನರ್ ಪರಿಶೀಲನಾ ಅರ್ಜಿಯ ತೀರ್ಪು ಸೋಮವಾರ ಪ್ರಕಟವಾಗಿದ್ದು, ಮರು ಪರಿಶೀಲನಾ ಅರ್ಜಿ ವಜಾಗೊಳಿಸಿ ಸುಪ್ರೀಂಕೋರ್ಟಿನ ನ್ಯಾಯಪೀಠವು ಮಹತ್ವದ ಆದೇಶ ಹೊರಡಿಸಿದ್ದು ಅಪರಾಧಿಗಳಿಗೆ ಗಲ್ಲುಶಿಕ್ಷೆ ಖಾಯಂಗೊಳಿಸಲಾಗಿದೆ.

2012ರ ಡಿಸೆಂಬರ್ 16ರಂದು ರಾತ್ರಿ ಸ್ನೇಹಿತನ ಜತೆ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ 23 ವರ್ಷದ ಯುವತಿ ಮೇಲೆ ಅಪ್ರಾಪ್ತ ವಯಸ್ಸಿನ ಬಾಲಕನೂ ಸೇರಿದಂತೆ ಆರು ಮಂದಿ ಕ್ರೂರವಾಗಿ ಹಲ್ಲೆ ನಡೆಸಿ ಅತ್ಯಾಚಾರ ಎಸಗಿದ್ದರು.ನಿರ್ಭಯಾ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣಕ್ಕೆ ದೇಶವೇ ಬೆಚ್ಚಿ ಬಿದ್ದಿತ್ತು. ಭಾರತಾದ್ಯಂತ ಈ ಘಟನೆಗೆ ವಿರೋಧ, ಪ್ರತಿಭಟನೆಗಳು ನಡೆದಿದ್ದು, ದೋಷಿಗಳಿಗೆ ಕಠಿಣ ಶಿಕ್ಷೆಯಾಗಬೇಕೆಂದು ಆಗ್ರಹಿಸಲಾಗಿತ್ತು.

ಜಾಹೀರಾತು
ಜಾಹೀರಾತು
ಜಾಹೀರಾತು

ಪ್ರಕರಣದ ವಿಚಾರಣೆ ನಡೆಸಿದ ದಿಲ್ಲಿ ಕೋರ್ಟ್ ಆರೋಪಿಗಳಾದ ಪವನ್ ಗುಪ್ತಾ (22), ವಿನಯ್ ಶರ್ಮಾ (23), ಮುಖೇಶ್ (29) ಮತ್ತು ಅಕ್ಷಯ್ ಕುಮಾರ್ ಸಿಂಗ್‌ (31)ಗೆ ಗಲ್ಲು ಶಿಕ್ಷೆ ವಿಧಿಸಿದೆ. ಮುಖ್ಯನ್ಯಾಯಮೂರ್ತಿ ದೀಪಕ್ ಮಿಶ್ರಾ ಮತ್ತು ನ್ಯಾಯಮೂರ್ತಿಗಳಾದ ಅಶೋಕ್ ಭೂಷಣ್ ಹಾಗೂ ಆರ್. ಭಾನುಮತಿ ಅವರನ್ನು ಒಳಗೊಂಡ ಮೂವರು ನ್ಯಾಯಮೂರ್ತಿಗಳ ಪೀಠ ಪ್ರಕರಣ ಕುರಿತ ತೀರ್ಪನ್ನು ನೀಡಿದೆ
ಅಪರಾಧಿಗಳಿಗೆ ಕೊನೆಯದಾಗಿ ರಾಷ್ಟ್ರಪತಿಗಳಿಗೆ ಕ್ಷಮಾದಾನ ಅರ್ಜಿ ಸಲ್ಲಿಸುವ ಅವಕಾಶ ಇದ್ದು, ರಾಷ್ಟ್ರಪತಿ ನಿರ್ಧಾರ ಏನು ಎಂಬುವುದನ್ನು ಕಾದು ನೋಡಬಹುದು.
ಪ್ರಕರಣದ ಐದನೇ ಆರೋಪಿ ರಾಮ್ ಸಿಂಗ್ ಎಂಬಾತ ಜೈಲಿನಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದು, ಆರನೇ ಆರೋಪಿ ಅಪ್ರಾಪ್ತನಾಗಿದ್ದ ಹಿನ್ನೆಲೆಯಲ್ಲಿ 3 ವರ್ಷ ಜೈಲು ಶಿಕ್ಷೆ ಅನುಭವಿಸಿ 2015ರ ನವೆಂಬರ್ ತಿಂಗಳಲ್ಲಿ ಬಿಡುಗಡೆಯಾಗಿದ್ದ.

ಜಾಹೀರಾತು
ಜಾಹೀರಾತು
ಜಾಹೀರಾತು