Recent Posts

Sunday, January 19, 2025
ರಾಜಕೀಯ

ಸದಾನಂದ ಗೌಡರ ಹೇಳಿಕೆಗೆ ತಿರುಗೇಟು ನೀಡಿದ ಬಿ.ಕೆ ಹರಿಪ್ರಸಾದ್- ಕಹಳೆ ನ್ಯೂಸ್

ಬಾಗಲಕೋಟೆ: ಎಐಸಿಸಿ ಪ್ರಧಾನ ಕಾರ್ಯದರ್ಶಿ ಬಿ.ಕೆ ಹರಿಪ್ರಸಾದ್ ಕೇಂದ್ರ ಸಚಿವ ಸದಾನಂದ ಗೌಡರ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿ.ಕೆ ಹರಿಪ್ರಸಾದ್ ಅವರು ಸಮ್ಮಿಶ್ರ ಸರ್ಕಾರದ ಭವಿಷ್ಯ ನುಡಿದವರ ಭವಿಷ್ಯ ಏನಾಗಿದೆ ಎಂದು ಎಲ್ಲರಿಗೂ ಗೊತ್ತಿದೆ ಎಂದು ತಿರುಗೇಟು ನೀಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಮುಂದಿನ ಚುನಾವಣೆಯಲ್ಲಿ ರಾಜ್ಯದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷ ಒಟ್ಟಾಗಿ ಚುನಾವಣೆ ಎದುರಿಸಲಿವೆ. ದೇಶದಲ್ಲಿ ಬಿಜೆಪಿ ಪ್ರಧಾನಿ ಹೊರತು ಪಡಿಸಿ, ಯಾರಾದ್ರೂ ಪ್ರಧಾನಿಯಾಗಬಹುದು ಅದೇ ನಮ್ಮ ಗುರಿ ಎಂದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಪಕ್ಷದ ಅಧ್ಯಕ್ಷ ರಾಹುಲ್ ಗಾಂಧಿ ಅವರು ಕೆಪಿಸಿಸಿ ಕಾರ್ಯಾಧ್ಯಕ್ಷ ನೇಮಕವನ್ನು ನಿರ್ಧರಿಸಲಿದ್ದಾರೆ. ನಿಗಮ ಮಂಡಳಿ ಆಯ್ಕೆಗೆ ಮೊದಲ ಹಂತದಲ್ಲಿ ಹಿರಿಯ ಶಾಸಕರಿಗೆ ನೀಡಲಾಗುತ್ತೆ, ಉಳಿದಂತೆ ಏರಿಯಾ ಕಾರ್ಯಕರ್ತರಿಗೆ ನೀಡಲಾಗುತ್ತೆ ಎಂದು ಸ್ಪಷ್ಟಪಡಿಸಿದರು.