Tuesday, January 21, 2025
ಸುದ್ದಿ

ಮೂಡುಬಿದಿರೆ: ಅಕೇಶಿಯಾ ಮರ ಅಕ್ರಮ ಸಾಗಾಟ-ಆರೋಪಿ ಸಹಿತ ವಾಹನ ವಶ – ಕಹಳೆ ನ್ಯೂಸ್

ಮೂಡುಬಿದಿರೆ : ಅಕ್ರಮವಾಗಿ ಅಕೇಶಿಯಾ ಮರ ಸಾಗಾಟ ಮಾಡುತ್ತಿದ್ದ ವಾಹನ ಹಾಗೂ ಆರೋಪಿಯನ್ನು ಅರಣ್ಯ ಸಂಚಾರಿದಳದ ಸಿಬ್ಬಂದಿ ವಶಕ್ಕೆ ತೆಗೆದುಕೊಂಡ ಘಟನೆ ಮೂಡುಬಿದಿರೆ ಪುರಸಭೆ ವ್ಯಾಪ್ತಿಯ ವಿಶಾಲನಗರ ಬಳಿ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ವಶಪಡಿಸಿಕೊಂಡಿರುವ ವಾಹನ ಹಾಗೂ ಸ್ವತ್ತುಗಳ ಮೌಲ್ಯ ಸುಮಾರು 19 ಲಕ್ಷ ರೂಪಾಯಿಗಳಾಗಿರಬಹುದೆಂದು ಅಂದಾಜಿಸಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಒರ್ವನನ್ನು ವಶಕ್ಕೆ ಪಡೆದುಕೊಂಡಿದ್ದು ತನಿಖೆ ನಡೆಸಲಾಗುತ್ತಿದೆ. ಸಂಚಾರಿದಳದ ಉಪ ಅರಣ್ಯ ಸಂರಕ್ಷಣಾಧಿಕಾರಿ ಪಿ .ಶ್ರೀಧರ್ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ವಲಯ ಅರಣ್ಯಾಧಿಕಾರಿ ಸಂಪತ್ ಪಟೇಲ್, ಉಪವಲಯ ಅರಣ್ಯಾಧಿಕಾರಿಗಳಾದ ಕಾಂತರಾಜ್, ಪ್ರಕಾಶ್ ಶೆಟ್ಟಿ, ಸಂತೋಷ್, ವಿಕಾಸ್‌ ವಾಹನ ಚಾಲಕ ಜಯಪ್ರಕಾಶ ಭಾಗವಹಿಸಿದ್ದಾರೆ.