Tuesday, January 21, 2025
ಸುದ್ದಿ

ಶ್ರೀ ನಿಕೇತನ ಸಭಾಭವನ ಕೆಲಿಂಜದಲ್ಲಿ ಶ್ರೀ ವರಮಹಾಲಕ್ಷ್ಮಿ ಪೂಜೆ ಹಾಗೂ ಜ್ಞಾನವಿಕಾಸ ಕೇಂದ್ರಗಳ ವಾರ್ಷಿಕೋತ್ಸವ – ಕಹಳೆ ನ್ಯೂಸ್

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್( ರಿ) ವಿಟ್ಲ ಇದರ ಕಾರ್ಯ ಕ್ಷೇತ್ರ ವ್ಯಾಪ್ತಿಯ ಕಲ್ಲಡ್ಕ ವಲಯದ ಪ್ರಗತಿ ಬಂದು ಸ್ವ-ಸಹಾಯ ಸಂಘಗಳ ಒಕ್ಕೂಟ ಕೆಲಿಂಜ ಹಾಗೂ ಮಾಮೇಶ್ವರ, ಹಿಂದೂ ಧಾರ್ಮಿಕ ಸೇವಾ ಸಮಿತಿ ಕೆಲಿಂಜ, ವರಹಮಹಾಲಕ್ಷ್ಮಿ ಪೂಜಾ ಸಮಿತಿ ಇದರ ಜಂಟಿ ಆಶ್ರಯದಲ್ಲಿ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜೆ ಹಾಗೂ ಜ್ಞಾನವಿಕಾಸ ಕೇಂದ್ರಗಳ ವಾರ್ಷಿಕೋತ್ಸವ ಕಾರ್ಯಕ್ರಮ ಹಿಂದೂ ಧಾರ್ಮಿಕ ಸೇವಾ ಸಮಿತಿ ಕೆಲಿಂಜ ಇದರ ಅಧ್ಯಕ್ಷರಾದ ಶ್ರೀಯುತ ಪದ್ಮನಾಭ ಗೌಡ ಅಢೈಯಿ ಇವರ ಅಧ್ಯಕ್ಷತೆಯಲ್ಲಿ ಶ್ರೀ ನಿಕೇತನ ಸಭಾಭವನ ಕೆಲಿಂಜ ಇಲ್ಲಿ ಜರಗಿತು. ಸಭಾ ಕಾರ್ಯಕ್ರಮವನ್ನು ವಿಟ್ಲ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕಿ ಶ್ರೀಮತಿ ಜಲಜಾಕ್ಷಿ ಬಾಲಪ್ಪ ಗೌಡ ದೀಪ ಬೆಳಗಿಸಿ ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ ಹಿಂದುಳಿದ ಕಲ್ಯಾಣ ಇಲಾಖೆಯ ದಕ್ಷಿಣ ಕನ್ನಡ ಇದರ ಜಿಲ್ಲಾಧಿಕಾರಿ ರಶ್ಮಿ ಎಸ್ಆರ್ 75ನೇ ವರ್ಷದ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಭಾರತದ ಧ್ವಜವನ್ನು ಗಣ್ಯ ಅತಿಥಿಗಳಿಗೆ ಹಾಗೂ ಒಕ್ಕೂಟದ ಪದಾಧಿಕಾರಿಗಳಿಗೆ ಹಸ್ತಾಂತರಿಸಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವವನ್ನು ಯಶಸ್ವಿಗೊಲಿಸಿ ಎಂದು ಕರೆ ನೀಡಿದರು.

ಧಾರ್ಮಿಕ ಉಪಾನ್ಯಾಸ ಮಾಡಿದ ಖ್ಯಾತ ಬರಹಗಾರ್ತಿ ಸಮಾಜ ಸೇವಕಿ ವಿಂದ್ಯಾ ಎಸ್ ರೈ ವರಹಮಹಾಲಕ್ಷ್ಮಿ ಪೂಜೆಯ ಮಹತ್ವ ಹಾಗೂ ನಮ್ಮ ಹಿಂದೂ ಧರ್ಮದ ಆಚಾರಣ ಪದ್ಧತಿಯಲ್ಲಿರುವ ತೊಡಕುಗಳನ್ನು ಬಿಚ್ಚಿಟ್ಟರು. ನಿವೃತ್ತ ಸೈನಿಕ ದಾಸಪ್ಪ ಪೂಜಾರಿ ನೆಕ್ಕಿಲಾರ್ ಯುವಜನತೆ ಹೆಚ್ಚಿನ ಸಂಖ್ಯೆಯಲ್ಲಿ ಭಾರತ ಸೇನೆಯನ್ನು ಸೇರಬೇಕೆಂದು ಮನವಿ ಮಾಡಿದರು. ವೇದಿಕೆಯಲ್ಲಿ ವೀರಕಂಬ ಗ್ರಾಮ ಪಂಚಾಯತ್ ಅಧ್ಯಕ್ಷ ದಿನೇಶ್, ವಿಟ್ಲ ಶ್ರವಣ ಜುವೆಲರ್ಸ್ ನ ಮಾಲಕ ಸದಾಶಿವ ಆಚಾರ್ಯ ಕೈಂತಿಲ , ,ಲಯನ್ ಸಂತೋμï ಕುಮಾರ್ ಶೆಟ್ಟಿ ಪೆಲತಡ್ಕ, ,ಮಾಮೇಶ್ವರ ಶ್ರೀ ಉಮಾ ಮಹೇಶ್ವರ ದೇವಸ್ಥಾನದ ಅಧ್ಯಕ್ಷರಾದ ವೀರಪ್ಪಗೌಡ, ಜನಜಾಗೃತಿ ವೇದಿಕೆ ಕಲ್ಲಡ್ಕ ವಲಯ ಅಧ್ಯಕ್ಷ ಭಟೃಪ್ಪ ಶೆಟ್ಟಿ, ಯೋಜನೆಯ ಕಲ್ಲಡ್ಕ ವಲಯ ಅಧ್ಯಕ್ಷೆ ಶ್ರೀಮತಿ ತುಳಸಿ, ವರಹ ಮಹಾಲಕ್ಷ್ಮಿ ಪೂಜೆ ಸಮಿತಿಯ ಅಧ್ಯಕ್ಷ ಶ್ರೀಮತಿ ಲಲಿತ, ಮೊದಲಾದವರು ಉಪಸ್ಥಿತರಿದ್ದರು.

ಕಲ್ಲಡ್ಕ ವಲಯ ಮೇಲ್ವಿಚಾರಕಿ ಶ್ರೀಮತಿ ಸುಗುಣಶೆಟ್ಟಿ ಸ್ವಾಗತಿಸಿ, ಯೋಜನೆಯ ವಿಟ್ಲ ತಾಲೂಕು ಯೋಜನಾಧಿಕಾರಿ ಶ್ರೀಯುತ ಚೆನ್ನಪ್ಪ ಗೌಡ ಪ್ರಾಸ್ತವಿಕ ಮಾತನಾಡಿ, ಸೇವಾ ಪ್ರತಿನಿಧಿ ರೇಣುಕಾ ಒಕ್ಕೂಟ ಹಾಗೂ ಜ್ಞಾನವಿಕಾಸ ಕೇಂದ್ರಗಳ ವರದಿಯನ್ನು ವಾಚಿಸಿ, ಜ್ಞಾನವಿಕಾಸ ಕೇಂದ್ರಗಳ ಸಮನ್ವಯ ಅಧಿಕಾರಿ ಸವಿತಾ ಬಹುಮಾನಗಳ ಪಟ್ಟಿಯನ್ನು ವಾಚಿಸಿದರು. ಮಾಮೇಶ್ವರ ಒಕ್ಕೂಟದ ಸೇವಾ ಪ್ರತಿನಿಧಿ ಯಶೋಧ ವಂದಿಸಿದರು. ಶ್ರೀಯುತ ಹರೀಶ್ ವಿ ಮಾಡ ಕಾರ್ಯಕ್ರಮ ನಿರೂಪಿಸಿದರು . ಶ್ರೀಯುತ ಬಾಲಕೃಷ್ಣ ಕಾರಂತ್ ಎರುಂಬು ಅವರ ಪೌರೋಹಿತ್ಯದಲ್ಲಿ ಶ್ರೀ ವರಮಹಾಲಕ್ಷ್ಮಿ ಪೂಜಾ ಕಾರ್ಯಕ್ರಮ ನಡೆಯಿತು.

ಸಬಾ ಕಾರ್ಯಕ್ರಮದ ಬಳಿಕ ಜ್ಞಾನವಿಕಾಸ ಕೇಂದ್ರದ ಸದಸ್ಯರುಗಳಿಂದ ವಿವಿಧ ಸಾಂಸ್ಕøತಿಕ ಕಾರ್ಯಕ್ರಮಗಳು ಜರಗಿತ್ತು. ಕಾರ್ಯಕ್ರಮದಲ್ಲಿ ಯೋಜನೆಯ ಕಲ್ಲಡ್ಕ ವಲಯಕ್ಕೆ ಸಂಬಂಧಪಟ್ಟ 9 ಒಕ್ಕೂಟಗಳ ಅಧ್ಯಕ್ಷರುಗಳು, ಪದಾಧಿಕಾರಿಗಳು ,ಸೇವಾ ಪ್ರತಿನಿಧಿಗಳು, ಸದಸ್ಯರುಗಳು ಹಾಗೂ ಕೆಲಿಂಜ ಹಿಂದು ಧಾರ್ಮಿಕ ಸೇವಾ ಸಮಿತಿಯ ಸದಸ್ಯರುಗಳು ಉಪಸ್ಥಿತರಿದ್ದರು. ನಂತರ ಸಾರ್ವಜನಿಕ ಅನ್ನ ಸಂತರ್ಪಣೆ ಜರಗಿತು.