Tuesday, January 21, 2025
ಸುದ್ದಿ

ಅಪಘಾತದಲ್ಲಿ ಗಂಭಿರ ಗಾಯಗೊಂಡು ಶಿಕ್ಷಕಿ ಅಂಬಿಕಾ ಚಿಕಿತ್ಸೆಗೆ ಸ್ಪಂದಿಸದೆ ಸಾವು : ಹೆಮ್ಮಾಡಿ ಪ್ರಾಥಮಿಕ ಶಾಲೆಯಲ್ಲಿ ಅಂತಿಮ ದರ್ಶನ – ಶಿಕ್ಷಕಿ ಸಾವಿಗೆ ಕಂಬನಿ ಮಿಡಿದ ವಿದ್ಯಾರ್ಥಿಗಳು – ಕಹಳೆ ನ್ಯೂಸ್

ಗುರುವಾರ ನಡೆದ ಅಪಘಾತದಲ್ಲಿ ಗಂಭಿರ ಗಾಯಗೊಂಡು ಜೀವನ್ಮರಣ ಹೋರಾಟ ನಡೆಸಿ ಕೊನೆಗೂ ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ ಶಿಕ್ಷಕಿ ಅಂಬಿಕಾ (32) ಮೃತದೇಹ ಶುಕ್ರವಾರ ಇಲ್ಲಿನ ಹೆಮ್ಮಾಡಿ ಪ್ರಾಥಮಿಕ ಶಾಲೆಗೆ ಆಗಮಿಸಿದ್ದು, ವಿದ್ಯಾರ್ಥಿಗಳು, ಶಿಕ್ಷಕರು, ಪೋಷಕರು ಸೇರಿದಂತೆ ನೂರಾರು ಮಂದಿ ಅಂತಿಮ ನಮನ ಸಲ್ಲಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಮುದೂರು ಸೆಳ್ಕೋಡು ನಿವಾಸಿ, ಶಿಕ್ಷಕಿ ಅಂಬಿಕಾ ಗುರುವಾರ ಬೆಳಿಗ್ಗೆ ಎಂದಿನ0ತೆ ನಾವುಂದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರಾಗಿರುವ ಪತಿ ಶ್ರೀಕಾಂತ್ ಅವರೊಂದಿಗೆ ಬೈಕಿನಲ್ಲಿ ಮನೆಯಿಂದ ಹೊರಟಿದ್ದರು. ವಂಡ್ಸೆ ಸಮೀಪ ಏಕಾಏಕಿ ರಸ್ತೆಯಲ್ಲಿ ದನ ಅಡ್ಡಬಂದ ಪರಿಣಾಮ ಬೈಕ್ ನಿಯಂತ್ರಣ ತಪ್ಪಿ ಇಬ್ಬರೂ ಸ್ಕಿಡ್ ಆಗಿ ಬಿದ್ದಿದ್ದಾರೆ. ಪತಿ ಶ್ರೀಕಾಂತ್ ಅವರಿಗೆ ಸಣ್ಣಪಟ್ಟು ಗಾಯಗಳಾದರೆ, ಹಿಂಬದಿಯಲ್ಲಿ ಕುಳಿತಿದ್ದ ಅಂಬಿಕಾ ಅವರಿಗೆ ತಲೆ ಭಾಗಕ್ಕೆ ಪೆಟ್ಟು ಬಿದ್ದಿತ್ತು. ಕೂಡಲೇ ಅವರನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಗುರುವಾರ ರಾತ್ರಿ ವೇಳೆ ಅವರು ಕೊನೆಯುಸಿರೆಳೆದಿದ್ದಾರೆ. ಮೃತ ಶಿಕ್ಷಕಿ ಅಂಬಿಕಾ ಅವರಿಗೆ ಒಂದೂವರೆ ವರ್ಷದ ಪುಟ್ಟ ಹೆಣ್ಣು ಮಗುವಿದೆ.

ಶಿಕ್ಷಕಿಗೆ ವಿದ್ಯಾರ್ಥಿಗಳ ಕಣ್ಣೀರ ಕಂಬನಿ :
ಶುಕ್ರವಾರ ಬೆಳಿಗ್ಗೆಯಿಂದಲೇ ಮೃತ ಶಿಕ್ಷಕಿಯ ಪಾರ್ಥಿವ ಶರೀರಕ್ಕಾಗಿ ಕಾಯುತ್ತಿದ್ದ ವಿದ್ಯಾರ್ಥಿಗಳು, ಪೋಷಕರು, ಸಹೋದ್ಯೋಗಿಗಳು, ಶಿಕ್ಷಕರ ಸಂಘಟನೆಯ ಪ್ರತಿನಿಧಿಗಳು ಹಾಗೂ ಸ್ಥಳೀಯರು ಮಧ್ಯಾಹ್ನದ ವೇಳೆ ಶಾಲೆಯ ಆವರಣಕ್ಕೆ ಮರಣೋತ್ತರ ಪರೀಕ್ಷೆ ಪೂರೈಸಿ ಬಂದ ಪಾರ್ಥಿವ ಶರೀರವನ್ನು ನೋಡುತ್ತಿದ್ದಂತೆ ದುಖ: ತೃಪ್ತರಾಗಿ ಕಣ್ಣೀರು ಸುರಿಸಿದರು. ಅಂತಿಮ ನಮನ ಸಲ್ಲಿಕೆಗಾಗಿ ಬಂದ ವಿದ್ಯಾರ್ಥಿಗಳು ಪಾರ್ಥಿವ ಶರೀರದ ಮೇಲೆ ಕೆಂಪು ಗುಲಾಬಿಯನ್ನು ಇಟ್ಟು ಗೌರವ ಸಲ್ಲಿಸುತ್ತಿದ್ದಂತೆ ದುಖ:ದ ಕಟ್ಟೆಯೊಡೆದು ಬಿಕ್ಕಿ ಬಿಕ್ಕಿ ಅಳುತ್ತಿದ್ದ ದೃಶ್ಯ ಕಲ್ಲು ಹೃದಯವನ್ನು ಕರಗಿಸುವಂತೆ ಇತ್ತು.

ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ, ಬೈಂದೂರು ವಲಯ ಶಿಕ್ಷಣಾಧಿಕಾರಿ ನಾಗೇಶ್ ನಾಯಕ್, ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಎಸ್.ರಾಜು ಪೂಜಾರಿ, ಗ್ರಾಮ ಪಂಚಾಯತ್ ಅಧ್ಯಕ್ಷ ಸುಧಾಕರ ದೇವಾಡಿಗ, ಸದಸ್ಯರಾದ ಯು.ಸತ್ಯನಾರಾಯಣ ರಾವ್, ರಾಘವೇಂದ್ರ ಪೂಜಾರಿ ಹೆಚ್, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಹರೀಶ್ ಭಂಡಾರಿ, ಕಾರ್ಯದರ್ಶಿ ಶ್ರೀಕಾಂತ ಹೆಮ್ಮಾಡಿ, ಮುಖ್ಯ ಶಿಕ್ಷಕ ದಿವಾಕರ, ಎಪಿಎಂಸಿ ಮಾಜಿ ಅಧ್ಯಕ್ಷ ಶರತಕುಮಾರ್ ಶೆಟ್ಟಿ ಬಾಳಿಕೆರೆ, ಕಟ್‍ಬೇಲ್ತೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ನಾಗರಾಜ್ ಪುತ್ರನ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಶೋಭಾ ಜಿ ಪುತ್ರನ್, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಚಂದ್ರ ಶೇಖರ ಶೆಟ್ಟಿ, ಸಮನ್ವಯಾಧಿಕಾರಿ ಕರುಣಾಕರ ಶೆಟ್ಟಿ, ಬೈಂದೂರು ವಲಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಅಧ್ಯಕ್ಷರಾದ ಶೇಖರ ಪೂಜಾರಿ ಇದ್ದರು.