ಶಿವಮೊಗ್ಗದಲ್ಲಿ ವೀರಸಾವರ್ಕರ್-ಟಿಪ್ಪು ಫ್ಲೆಕ್ಸ್ ವಿವಾದ – ಇಬ್ಬರು ಹಿಂದೂ ಯುವಕರಿಗೆ ಚಾಕು ಇರಿತ ; ನಾಲ್ವರು ಆರೋಪಿಗಳು ಅರೆಸ್ಟ್ – ಪೊಲೀಸರಿಗೆ ಚಾಕು ಇರಿಯಲು ಮುಂದಾದ ಜಿಹಾದಿ ಜಬೀವುಲ್ಲಾನ ಕಾಲಿಗೆ ಫಯರ್ ಮಾಡಿದ ” ಸಿಂಗಂ” ಪಿಎಸ್‍ಐ ಮಂಜುನಾಥ್..! – ಕಹಳೆ ನ್ಯೂಸ್
ಶಿವಮೊಗ್ಗ: ನಿನ್ನೆ (ಸೋಮವಾರ) ಶಿವಮೊಗ್ಗದಲ್ಲಿ ಸ್ವಾತಂತ್ರ್ಯ ಹೋರಾಟಗಾರ ವೀರ್ ಸಾವರ್ಕರ್ ಹಾಗೂ ಟಿಪ್ಪು ಸುಲ್ತಾನ್ ಫೋಟೋ ವಿವಾದ ಭುಗಿಲೆದ್ದು, ಇಬ್ಬರು ಹಿಂದೂ ಯುವಕರಿಗೆ ಚಾಕು ಇರಿದಿರುವ ಘಟನೆ ನಡೆದಿತ್ತು. ವೀರ್ ಸಾವರ್ಕರ್ ಅವರ ಫೋಟೋ ಅನ್ನು ಸ್ವಾತಂತ್ರ್ಯದ ಅಮೃತ ಮಹೋತ್ಸವದ ನಿಮಿತ್ತ ಹಿಂದೂ ಸಂಘಟನೆಯ ಕೆಲವು ಯುವಕರು ಅಳವಡಿಸಿದ್ದಕ್ಕೆ ವಿರೋಧ ವ್ಯಕ್ತಪಡಿಸಿ ಆ ಫೋಟೋ ಕಿತ್ತೆಸೆದು ಅಲ್ಲಿ ಟಿಪ್ಪು ಫೋಟೋ ಇಡಲು ಮುಂದಾಗಿದ್ದೇ ಈ ಘಟನೆಗೆ ಕಾರಣವಾಗಿತ್ತು.
ಈ ಫೋಟೋ ವಿವಾದ ಹಿಂದೂ ಮತ್ತು ಮುಸ್ಲಿಂ ಸಮುದಾಯದ ನಡುವೆ ಶಿವಮೊಗ್ಗದಲ್ಲಿ ಕಿಚ್ಚು ಹಚ್ಚಿಸಿ ಹಿಂಸಾಚಾರಕ್ಕೆ ತಿರುಗಿತ್ತು. ಈ ಹಿನ್ನೆಲೆಯಲ್ಲಿ ಶಿವಮೊಗ್ಗದಲ್ಲಿ ನಿಷೇಧಾಜ್ಱಎ ಜಾರಿ ಮಾಡಲಾಗಿತ್ತು. ಇದರ ಹೊರತಾಗಿಯೂ ಅಂಗಡಿಯಲ್ಲಿ ಕೆಲಸ ಮಾಡಿಕೊಂಡು ಮನೆಗೆ ಹೊರಟಿದ್ದ ಪ್ರೇಮ್ ಸಿಂಗ್ ಮತ್ತು ಪ್ರವೀಣ್ ಕುಮಾರ್ ಎನ್ನುವವರಿಗೆ ಚಾಕುವಿನಿಂದ ಇರಿದು ಇನ್ನಷ್ಟು ಹಿಂಸಾಚಾರಕ್ಕೆ ಪ್ರಚೋದನೆ ನೀಡಿರುವ ಘಟನೆ ನಡೆದಿತ್ತು.
ಈ ಘಟನೆಗೆ ಸಂಬಂಧಿಸಿದಂತೆ ಚಾಕು ಇರಿದಿರುವ ಇದುವರೆಗೆ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ಉಳಿದವರಿಗಾಗಿ ಶೋಧ ಕಾರ್ಯ ನಡೆದಿದೆ. ಈ ಕುರಿತು ಶಿವಮೊಗ್ಗ ಎಸ್ಪಿ ಲಕ್ಷ್ಮೀಪ್ರಸಾದ್ ಹೇಳಿಕೆ ನೀಡಿದ್ದಾರೆ.
ಶಿವಮೊಗ್ಗ ಜೆಸಿ ನಗರದ ನದೀಮ್ (25) ಹಾಗೂ ಬುದ್ಧ ನಗರದ ಅಬ್ದುಲ್ ರೆಹಮಾನ್ (25), ಜಬೀವುಲ್ಲಾ ಮತ್ತು ಇನ್ನೋರ್ವ ಆರೋಪಿಯನ್ನು ಇದಾಗಲೇ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಪೈಕಿ ಜಬೀವುಲ್ಲಾ ಪೊಲೀಸರ ಮೇಲೆ ಹಲ್ಲೆ ಮಾಡಿ ಓಡಿಹೋಗಲು ಯತ್ನಿಸುತ್ತಿದ್ದಾಗ ಆತ್ಮ ರಕ್ಷಣೆಗಾಗಿ ಆತನ ಕಾಲಿಗೆ ಗುಂಡೇಟು ಹಾಕಲಾಗಿದೆ. ಈತನಿಗೆ ಈಗಾಗಲೇ ಚಿಕಿತ್ಸೆ ನೀಡಲಾಗಿದ್ದು, ಜೈಲಿನ ವಾರ್ಡ್ಗೆ ಶಿಫ್ಟ್ ಮಾಡಲಾಗಿದೆ.
ಆರೋಪಿಗಳ ಹಿನ್ನೆಲೆ, ಅವರು ಯಾವ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದಾರೆ ಎಂಬುದು ತನಿಖೆ ನಂತರವಷ್ಟೇ ತಿಳಿದುಬರಲಿದೆ. ಅವರ ವಿರುದ್ಧ ಅವರ ವಿರುದ್ಧ ದಾಖಲಿಸುವುದರ ಜೊತೆಗೆ ಆಸ್ತಿ ಮುಟ್ಟುಗೋಲು ಹಾಕುವ ವಿಚಾರವಾಗಿ ಜಿಲ್ಲಾಧಿಕಾರಿಗಳ ಜೊತೆ ಚರ್ಚಿಸಿ ಕ್ರಮ ಕೈಗೊಳ್ಳುವ ಯೋಚನೆ ಪೊಲೀಸ್ ಇಲಾಖೆಗಿದೆ.
ಶಿವಮೊಗ್ಗದಲ್ಲಿ ಮೂರು ದಿನ ನಿಷೇಧಾಕ್ಷೆ ಜಾರಿ ಮಾಡಲಾಗಿದೆ. ಮೂರು ದಿನಗಳವರೆಗೆ 40 ವರ್ಷ ಕಡಿಮೆ ವಯಸ್ಸಿನ ಗಂಡಸರನ್ನು ಹಿಂಬದಿಯಲ್ಲಿ ಬೈಕ್ನಲ್ಲಿ ಕೂರಿಸಿಕೊಂಡು ಸಂಚರಿಸುವಂತಿಲ್ಲ ಎಂದು ಎಸ್ಪಿ ಲಕ್ಷ್ಮೀಪ್ರಸಾದ್ ಹೇಳಿಕೆ ನೀಡಿದ್ದಾರೆ. ಶಿವಮೊಗ್ಗದಲ್ಲಿ ಎಲ್ಲೆಡೆ ವಾಹನಗಳ ತಪಾಸಣೆ ನಡೆಸುತ್ತೇವೆ. ಭದ್ರತೆಗಾಗಿ 15 ಪ್ಲಟೂನ್ ಬಂದಿದ್ದು, ಇನ್ನೂ 6 ಪ್ಲಟೂನ್ ಬರಲಿವೆ. ಹೆಚ್ಚುವರಿಯಾಗಿ ಓರ್ವ ಎಸ್ಪಿ, ಮೂವರು ಹೆಚ್ಚುವರಿ ಎಸ್ಪಿ ಸಿಐಡಿಯ ಮೂವರು ಡಿವೈಎಸ್ಪಿ, 10 ಇನ್ಸ್ಪೆಕ್ಟರ್ ಅವರನ್ನು ನಿಯೋಜನೆ ಮಾಡಲಾಗಿದೆ.