Recent Posts

Sunday, January 19, 2025
ಸುದ್ದಿ

ಮಾಜಿ ಉನ್ನತ ಶಿಕ್ಷಣ ಸಚಿವ ಬಿ ಎ ಮೊಹಿದ್ದೀನ್ ಇನ್ನಿಲ್ಲ – ಕಹಳೆ ನ್ಯೂಸ್

ಮಂಗಳೂರು;ಮಾಜಿ ಉನ್ನತ ಶಿಕ್ಷಣ ಸಚಿವ, ಹಿರಿಯ ರಾಜಕೀಯ ಮುತ್ಸದ್ದಿ ಬಿ.ಎ. ಮೊಹಿದಿನ್ (81) ಅವರು ಮಂಗಳವಾರ  ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

1978 ರಲ್ಲಿ ಬಂಟ್ವಾಳ ದ ಶಾಸಕರಾಗಿದ್ದ ಬಿ ಎ ಮೊಹಿದ್ದಿನ್ ಕಾಂಗ್ರೆಸ್ ತ್ಯಜಿಸಿ ಜನತಾದಳ ಸೇರಿದ್ದರು. ಜನತಾದಳದಲ್ಲಿ ಇದ್ದ ಸಂದರ್ಭದಲ್ಲಿ ಜೆ ಹೆಚ್ ಪಟೇಲ್ ಸರಕಾರದಲ್ಲಿ ಉನ್ನತ ಶಿಕ್ಷಣ ಸಚಿವರಾಗಿದ್ದರು. ಬಳಿಕ ಮತ್ತೆ ಕಾಂಗ್ರೆಸ್ ಸೇರಿದ್ದರು.
ಇತ್ತೀಚೆಗೆ ಅನಾರೋಗ್ಯಕ್ಕೆ ಈಡಾಗಿದ್ದ ಬಿ.ಎ. ಮೊಹಿದಿನ್ ಅವರು ಮಂಗಳೂರಿನಲ್ಲಿ ಚಿಕಿತ್ಸೆಯಿಂದ ಚೇತರಿಸಿಕೊಂಡ ಬಳಿಕ ಕಳೆದ ವಾರ ಬೆಂಗಳೂರಿಗೆ ತೆರಳಿದ್ದರು. ಅಲ್ಲಿ ಮತ್ತೆ ಅನಾರೋಗ್ಯಕ್ಕೆ ಒಳಗಾದ ಅವರು ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದರು. ಮಂಗಳವಾರ ಮುಂಜಾನೆ ನಿಧನರಾಗಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು